Wednesday, September 16, 2026
Homeಕ್ರೈಂಮಂಗಳೂರು : 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆಆರೋಪಿ ಏರ್‌ಪೋರ್ಟ್‌ನಲ್ಲಿ ಅರೆಸ್ಟ್..!

ಮಂಗಳೂರು : 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆಆರೋಪಿ ಏರ್‌ಪೋರ್ಟ್‌ನಲ್ಲಿ ಅರೆಸ್ಟ್..!

ಮಂಗಳೂರು : ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಬಜಾಲ್–ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ಬಂಧಿತ ಆರೋಪಿ.
2020ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ IPC ಕಲಂ 143, 147, 148, 504, 323, 324, 506, 427 r/w 149 ಹಾಗೂ Prevention of Destruction and Loss of Property Act ಕಲಂ 2(a) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ನೌಫಲ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಸೆ.15ರಂದು ವಿದೇಶದಿಂದ ಮಂಗಳೂರಿಗೆ ವಾಪಸ್ಸಾಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆತನನ್ನು ದಸ್ತಗಿರಿ ಮಾಡಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆ.29ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular