Wednesday, September 30, 2026
Homeಜಿಲ್ಲೆಮಂಗಳೂರು : MRPL ನ CHT ಯುನಿಟ್‌ನಲ್ಲಿ ಭಾರೀ ಸ್ಫೋಟ : ಓರ್ವ ಕಾರ್ಮಿಕ ಸಾವು,...

ಮಂಗಳೂರು : MRPL ನ CHT ಯುನಿಟ್‌ನಲ್ಲಿ ಭಾರೀ ಸ್ಫೋಟ : ಓರ್ವ ಕಾರ್ಮಿಕ ಸಾವು, ಹಲವರಿಗೆ ಗಂಭೀರ ಗಾಯ..!

ಮಂಗಳೂರು : ಮಂಗಳೂರಿನ MRPL ವ್ಯಾಪ್ತಿಯ CHT (Hydro Sulphur Treatment) ಯುನಿಟ್‌ನಲ್ಲಿ ಸಂಭವಿಸಿದ ಭಾರೀ ಸ್ಫೋಟದ ಬೆನ್ನಲ್ಲೇ ಸಂಭವಿಸಿದ ಬೆಂಕಿ ಅವಘಡದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಸ್ಫೋಟದ ಬಳಿಕ ನಾಪತ್ತೆಯಾಗಿದ್ದ ಮೂಲ್ಕಿ ಮೂಲದ 30 ವರ್ಷದ ಮನೀಶ್ ಕರ್ಕೇರ ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಕಾಂಟ್ರಾಕ್ಟ್ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮನೀಶ್, ಸ್ಫೋಟದ ಬಳಿಕ ನಾಪತ್ತೆಯಾಗಿದ್ದರು. ಘಟನಾ ಸ್ಥಳದಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಘಟನೆಯಲ್ಲಿ ಮತ್ತೋರ್ವ ಕಾರ್ಮಿಕ ರಾಜೇಶ್ ಬ್ಯಾಪ್ಟಿಸ್ಟ್ ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಸುಮಾರು ಶೇ.35ರಷ್ಟು ಸುಟ್ಟ ಗಾಯಗಳಾಗಿವೆ. ಅವರನ್ನು ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದ್ದು, ICUನಲ್ಲಿ ಚಿಕಿತ್ಸೆ ಮುಂದುವರಿದಿದೆ.
ಇನ್ನು 8 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ಬಳಿಕ CHT ಯುನಿಟ್‌ನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣದ ಕಾರ್ಯಾಚರಣೆಯಿಂದ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಫೋಟಕ್ಕೆ ಕಾರಣವೇನು ಎಂಬುದರ ಕುರಿತು ಅಧಿಕಾರಿಗಳಿಂದ ಹೆಚ್ಚಿನ ಪರಿಶೀಲನೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular