Friday, July 31, 2026
Homeರಾಜ್ಯಮಂಡ್ಯ : ಸರಕಾರದ ಶಕ್ತಿ ಯೋಜನೆಯಿಂದ ವ್ಯಾಪಾರ ಕುಸಿತ : ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ...

ಮಂಡ್ಯ : ಸರಕಾರದ ಶಕ್ತಿ ಯೋಜನೆಯಿಂದ ವ್ಯಾಪಾರ ಕುಸಿತ : ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು, ಡೆತ್‌ನೋಟ್‌ನಲ್ಲಿ ಉಲ್ಲೇಖ.

ಮಂಡ್ಯ : ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಪ್ರಭಾಕರ್ ಬರೆದಿದ್ದ ಡೆತ್‌ನೋಟ್‌ನಲ್ಲಿ ಸರ್ಕಾರದ ಶಕ್ತಿ ಯೋಜನೆಯಿಂದ ತಮ್ಮ ಬಟ್ಟೆ ವ್ಯಾಪಾರ ಕುಸಿದಿದೆ ಎಂದು ಉಲ್ಲೇಖಿಸಿರುವುದು ಬೆಳಕಿಗೆ ಬಂದಿದೆ.

ಪ್ರಭಾಕರ್ ವ್ಯಾಪಾರ ನಷ್ಟ, ಸಾಲದ ಒತ್ತಡ ಹಾಗೂ ಖಾಸಗಿ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ಮನನೊಂದಿದ್ದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ನಿನ್ನೆ ರಾತ್ರಿ ಸುಮಾರು 3:30ರ ವೇಳೆಗೆ ಪತ್ನಿ ಜ್ಯೋತಿ ಹಾಗೂ ಪುತ್ರ ಸಂತೋಷ್ ಅವರನ್ನು ಉಸಿರುಗಟ್ಟಿಸಿ ಹತ್ಯೆಗೈದು, ಬಳಿಕ ತನ್ನ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.

ಮೃತ ಸಂತೋಷ್‌ಗೆ ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಬೆಳಗಿನ ಜಾವ ಘಟನೆ ನಡೆದ ಕಾರಣ ಸೊಸೆ ಗಾಢ ನಿದ್ರೆಯಲ್ಲಿದ್ದು, ಬೆಳಿಗ್ಗೆ ಅತ್ತೆಯನ್ನು ಎಬ್ಬಿಸಲು ಹೋದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಡೆತ್‌ನೋಟ್ ವಶಪಡಿಸಿಕೊಂಡಿರುವ ಪೊಲೀಸರು ಅದರಲ್ಲಿನ ಮಾಹಿತಿಯನ್ನು ಪರಿಶೀಲಿಸುತ್ತಿದ್ದು, ಸಾಲದ ಒತ್ತಡ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular