Wednesday, September 17, 2025
Flats for sale
Homeಜಿಲ್ಲೆಮಡಿಕೇರಿ : ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು..!

ಮಡಿಕೇರಿ : ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು..!

ಮಡಿಕೇರಿ : ಕುಶಾಲನಗರದ ಹಾರಂಗಿ ರಸ್ತೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಮಾರಕಾಸ್ತ್ರ ಹಿಡಿದು ರಿಲ್ಸ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದ ವಿದ್ಯಾರ್ಥಿ ವಿರುದ್ದ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿ ಕಾಲೇಜಿನೊಳಗೆ ಲಾಂಗ್ ಹಿಡಿದು ರಿಲ್ಸ್ ಮಾಡಿದ್ದ, ಇದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜು ಪ್ರಾಂಶುಪಾಲರು ಹಾಗೂ ಆಡಳಿತ ವ್ಯವಸ್ಥೆ ವಿರುದ್ಧ ಕೂಡ ಅಸಮಧಾನ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣದ ಮೇಲೆ ನಿಗಾವಹಿಸಿದ ಪೊಲೀಸರು ರಿಲ್ಸ್ ಮಾಡಿದ್ದ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲು ಮಾಡಿ ಮುಂದಿನ ಕ್ತಮ ಕೈಗೊಂಡಿದ್ದಾರೆ. ಪ್ರಕರಣ ದಾಖಲಾದ‌ ಹಿನ್ನೆಲೆಯಲ್ಲಿ ವಿದ್ಯಾರ್ಥಿ ತಾನು ಮಾಡಿದ ತಪ್ಪಿಗೆ ಕ್ಷಮೆಯಾಚಿಸಿದ್ದಾನೆ.

RELATED ARTICLES

LEAVE A REPLY

Please enter your comment!
Please enter your name here

Most Popular