ಕೊಡಗು : ಕುಟ್ಟ ಪ್ರದೇಶದಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಗಂಭೀರ ಆರೋಪ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಹೋಂಸ್ಟೇ ಮಾಲೀಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅಮೆರಿಕದ ವಾಷಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ‘ದೇವಿ ವಿಲ್ಲಾ’ ಎಂಬ ಖಾಸಗಿ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದೇ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕ ವಿಶಾಲ್ ಮೇಲೂ ಆರೋಪಗಳು ಕೇಳಿಬಂದಿದ್ದು, ಅವರನ್ನು ಸಹ ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.
ಪ್ರಕರಣದ ನಿಖರ ಹಿನ್ನೆಲೆ ಹಾಗೂ ಇತರ ಅಂಶಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.


