ಮಡಿಕೇರಿ : ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಯು.ಎಸ್.ಮೀನ ತೇರ್ಗಡೆ ಹೊಂದಿದ ಪರಿಣಾಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದ್ದು ಇಂದು ಗ್ರಾಮದಲ್ಲಿ ಸಂತೋಷಕ್ಕೆ ಕಾರಣ ಆಗಿತ್ತು.ಸೂರ್ಲಬ್ಬಿ ಶಾಲೆಯಲ್ಲಿ ಏಕೈಕ ವಿದ್ಯಾರ್ಥಿನಿ ಮೀನ ಮಾತ್ರ ಕಲಿಯುತ್ತಿದ್ದಳು. ಏಕೈಕ ವಿದ್ಯಾರ್ಥಿಯನ್ನು ಹೊಂದಿದ್ದ ಈ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೀನ ತೇರ್ಗಡೆಯಾಗಿರುವುದು ಶಿಕ್ಷಣ ಇಲಾಖೆಗೆ ಪುಷ್ಠಿ ನೀಡಿದೆ ಎಂದು ಸಂಭ್ರಮ ಪಡುತ್ತಿರುವಾಗಲೆ ಇದೀಗ ಆಕೆಯ ಹತ್ಯೆ ನಡೆದಿತ್ತು .ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂದ ಮಾಹಿತಿ ಪ್ರಕಾರ ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಕೊಡಗು ಅಪ್ರಾಪ್ತೆ ರುಂಡ ಕತ್ತರಿಸಿದ ಬರ್ಬರ ಹತ್ಯೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರಿಗೆ ಕೊಲೆ ಮಾಡಿದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಬಂದಿತ್ತು. ಆದರೆ, ಆರೋಪಿ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಇಲ್ಲ. ಕೊಲೆಯಾದ ಬಾಲಕಿ ಮೀನಾ ರುಂಡ ಕೂಡ ಇನ್ನೂ ಸಿಕ್ಕಿಲ್ಲ ಅನ್ನೋ ಮಾಹಿತಿ ನೀಡಿದ್ದಾರೆ.
ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಆಕೆಯ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಆರೋಪಿ ವಿರೂಪಾಕ್ಷ. ಕೊಲೆ ಮಾಡಿದ್ದನು ಇದೀಗ ಈ ಪ್ರಕರಣವು ಕೊಲೆಯಲ್ಲೇ ಅಂತ್ಯವಾಗಿದೆ ಎಂಬ ಸುದ್ದಿ ಹರಡಿದೆ.
ಬಾಲಕಿಯನ್ನು ಭಯಾನಕವಾಗಿ ಕೊಂದು ರುಂಡವನ್ನು ತೆಗೆದುಕೊಂಡು ಹೋಗಿದ್ದ. ಪ್ರಕಾಶ್ ಎಲ್ಲಿಗೆ ಹೋಗಿದ್ದಾನೆ ಅನ್ನೋದು ಯಾರಿಗೂ ಗೊತ್ತಿರಲಿಲ್ಲ.ಕೊಲೆಯಾದ ಬಾಲಕಿಯ ರುಂಡದ ಜೊತೆಗೆ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚಲು ಬಲೆ ಬೀಸಿದ್ದರು. ಇದೀಗ ಬಂದ ಮಾಹಿತಿ ಪ್ರಕಾರ ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದೆ .ಬಾಲಕಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಪ್ರಕಾಶ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂಬ ಸುದ್ದಿ ಹರಡಿತ್ತು.ಈ ಬಗ್ಗೆ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.