ಮುಂಬೈ : ಸ್ಮಾರ್ಟ್‌ಫೋನ್ ಪ್ರಿಯರ ಕಾಯುವಿಕೆ ಮುಗಿದಿದೆ! ಬಹುನಿರೀಕ್ಷಿತ ಗೂಗಲ್ ಪಿಕ್ಸೆಲ್ 9 ಪ್ರೊ (Google Pixel 9 Pro) ಮೊಬೈಲ್‌ನ ಮಾರಾಟದ ದಿನಾಂಕವನ್ನು ಅಂತಿಮವಾಗಿ ಘೋಷಿಸಲಾಗಿದೆ. ಹೌದು, ಗೂಗಲ್ (Google) ಕಂಪನಿಯು ಈ ಫೋನನ್ನು ಆಗಸ್ಟ್‌ನಲ್ಲಿ ಬಿಡುಗಡೆ ಮಾಡಿತ್ತು. ಇದೀಗ, ಅಕ್ಟೋಬರ್ 17 ರಂದು ಮಧ್ಯಾಹ್ನ 12 ಗಂಟೆಯಿಂದ ಫ್ಲಿಪ್‌ಕಾರ್ಟ್ ಮೂಲಕ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ. ನೀವು, ಇದನ್ನು ನಾಲ್ಕು ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು. ಇದರ ಆರಂಭಿಕ ಬೆಲೆ ಬರೋಬ್ಬರಿ 1,09,999 ರೂ. ಆಗಿದೆ. ಮೊದಲ ದಿನ ಖರೀದಿಸಿದರೆ ಹಲವು ಭರ್ಜರಿ ಆಫರ್‌ಗಳನ್ನು ಪಡೆಯಬಹುದು.
ಗೂಗಲ್ ಪಿಕ್ಸೆಲ್ 9 ಪ್ರೊ ಮೊಬೈಲ್ ಎಐ ಫೀಚರ್ಸ್ ಜೊತೆಗೆ ಹಲವು ಅಪ್‌ಗ್ರೇಡ್ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಫೋನ್ 6.3 ಇಂಚಿನ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಗೂಗಲ್ ಟೆನ್ಸರ್ G4 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಸೆಲ್ಫಿ ಪ್ರಿಯರಿಗಾಗಿ 42 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ, 4700mAh ಬ್ಯಾಟರಿ ಮತ್ತು 27W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರಾಟಕ್ಕೆ ಸಜ್ಜಾಗಿದೆ.
ಭಾರತದಲ್ಲಿ ಗೂಗಲ್ ಪಿಕ್ಸೆಲ್ 9 ಪ್ರೊ ಬೆಲೆ ಮತ್ತು ಲಭ್ಯತೆ ಕಂಪನಿಯು ಭಾರತದಲ್ಲಿ ಗೂಗಲ್ ಪಿಕ್ಸೆಲ್ 9 ಪ್ರೊ ಅನ್ನು 1,09,999 ರೂ.ಗಳ ಆರಂಭಿಕ ಬೆಲೆಯಲ್ಲಿ ಮಾರಾಟ ಮಾಡಲಿದೆ. ಅಕ್ಟೋಬರ್ 17 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ನಲ್ಲಿ ಮಾರಾಟ ಪ್ರಾರಂಭವಾಗುತ್ತದೆ. ಇದರೊಂದಿಗೆ, ಇತರೆ ಚಿಲ್ಲರೆ ಮಳಿಗೆಗಳಲ್ಲಿಯೂ ಖರೀದಿಗೆ ಲಭ್ಯವಿರುತ್ತದೆ. ಪ್ರಸ್ತುತ, ಗೂಗಲ್ ಮತ್ತು ಫ್ಲಿಪ್‌ಕಾರ್ಟ್ ಈ ಫೋನಿನ ಖರೀದಿ ಮೇಲಿನ ಬ್ಯಾಂಕ್ ರಿಯಾಯಿತಿ ಬಗ್ಗೆ ಮಾಹಿತಿಯನ್ನು ನೀಡಿಲ್ಲ. ಇದು ಅಕ್ಟೋಬರ್ 17 ರಂದು ತಿಳಿಯಲಿದೆ. ಗೂಗಲ್ ಪಿಕ್ಸೆಲ್ 9 ಪ್ರೊ ಈ ಹಿಂದೆ ಪರಿಚಯಿಸಲಾದ ಗೂಗಲ್ ಪಿಕ್ಸೆಲ್ 9 ಪ್ರೊ XL (Google Pixel 9 Pro XL) ನಂತೆಯೇ, ಪಿಂಗಾಣಿ, ಗುಲಾಬಿ ಸ್ಫಟಿಕ ಶಿಲೆ, ಹೇಸ್ ಮತ್ತು ಅಬ್ಸಿಡಿಯನ್ ಬಣ್ಣಗಳಲ್ಲಿ ಬರಲಿದೆ. ಅಧಿಕೃತ ಪಟ್ಟಿಯ ಪ್ರಕಾರ, ಇದು ಭಾರತದಲ್ಲಿ 16GB + 256GB ಸ್ಟೋರೇಜ್ ಆಯ್ಕೆಯಲ್ಲಿ ಮಾತ್ರ ಲಭ್ಯವಿರುತ್ತದೆ. ಗೂಗಲ್ ಪಿಕ್ಸೆಲ್ 9 ಪ್ರೊ ಮೊಬೈಲ್ ಗೂಗಲ್ ಪಿಕ್ಸೆಲ್ 9 ಪ್ರೊ XL ಫೋನಿನಂತೆಯೇ ಬಹುತೇಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಹೊಂದಿದೆ. ಆದರೆ, ಇದು ಚಿಕ್ಕ ಡಿಸ್ಪ್ಲೇ ಮತ್ತು ಕಡಿಮೆ ಬ್ಯಾಟರಿಯನ್ನು ಹೊಂದಿದೆ.
ಗೂಗಲ್ ಪಿಕ್ಸೆಲ್ 9 ಪ್ರೊ ವೈಶಿಷ್ಟ್ಯಗಳು : ಡಿಸ್ಪ್ಲೇ ವಿವರ ಗೂಗಲ್ ಪಿಕ್ಸೆಲ್ 9 ಪ್ರೊ ಮೊಬೈಲ್ 6.3 ಇಂಚಿನ LTPO ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1280 x 2856 ಪಿಕ್ಸೆಲ್ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 3,000 ನಿಟ್‌ಗಳವರೆಗೆ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಇದು ಭದ್ರತೆಗಾಗಿ, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ ಕಂಪನಿಯು ಈ ಮೊಬೈಲ್ ಅನ್ನು ಗೂಗಲ್ ಟೆನ್ಸರ್ G4 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಇದು ಟೈಟಾನ್ M2 ಭದ್ರತಾ ಚಿಪ್‌ನೊಂದಿಗೆ ಬರುತ್ತದೆ. ಈ ಮೊಬೈಲ್ 16GB LPDDR5X RAM + 256GB UFS 3.1 ಇಂಟರ್ನಲ್ ಸ್ಟೋರೇಜ್ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 14 ನೊಂದಿಗೆ ಬರುತ್ತದೆ. ಕ್ಯಾಮೆರಾ ಸೆಟಪ್ ಈ ಫೋನ್ ಹಿಂದಿನ ಪ್ಯಾನೆಲ್‌ನಲ್ಲಿ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು OIS ಜೊತೆಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಇದರೊಂದಿಗೆ, 48 ಮೆಗಾಪಿಕ್ಸೆಲ್ 5x ಟೆಲಿಫೋಟೋ ಕ್ಯಾಮೆರಾ ಮತ್ತು 48 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾವನ್ನು ಹೊಂದಿದೆ. ಸೆಲ್ಫಿ ಪ್ರಿಯರಿಗಾಗಿ, ಈ ಫೋನಿನಲ್ಲಿ 42 ಮೆಗಾಪಿಕ್ಸೆಲ್ಕ್ಯಾ ಮೆರಾ ಲಭ್ಯವಿದೆ. ಬ್ಯಾಟರಿ ಮತ್ತು ಚಾರ್ಜಿಂಗ್ ಗೂಗಲ್ ಪಿಕ್ಸೆಲ್ 9 ಪ್ರೊ ಮೊಬೈಲ್ 4700mAh ಸಾಮರ್ಥ್ಯ ಬ್ಯಾಟರಿಯನ್ನು ಹೊಂದಿದೆ. ಇದು, 27W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 21W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
ಇತರೆ ವೈಶಿಷ್ಟ್ಯಗಳು ಗೂಗಲ್ ಪಿಕ್ಸೆಲ್ 9 ಪ್ರೊ ಸ್ಮಾರ್ಟ್‌ಫೋನ್ ಅಲ್ಟ್ರಾಸಾನಿಕ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, IP68 ರೇಟಿಂಗ್ ಮತ್ತು ತಾಪಮಾನ ಸಂವೇದಕ ಹೊಂದಿದೆ. ಜೊತೆಗೆ, ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೋ ಸ್ಪೀಕರ್, 5G, 4G VoLTE, ವೈ-ಫೈ, ಬ್ಲೂಟೂತ್ 5.3 ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.