Friday, March 13, 2026
Flats for sale
Homeಕ್ರೀಡೆಮುಂಬೈ : ಟಿ-20 ತಂಡಕ್ಕೆ ಮರಳಿದ ರೋಹಿತ್, ವಿರಾಟ್ ಕೊಹ್ಲಿ.

ಮುಂಬೈ : ಟಿ-20 ತಂಡಕ್ಕೆ ಮರಳಿದ ರೋಹಿತ್, ವಿರಾಟ್ ಕೊಹ್ಲಿ.

ಮುಂಬೈ: ಅಫ್ಘಾನಿಸ್ತಾನ ತಂಡದ ವಿರುದ್ಧ ನಡೆಯಲಿರುವ ಮೂರು ಟಿ-೨೦ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ.

ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಲಿದ್ದು,ರೋಹಿತ್ ಜೊತೆಗೆ ವಿರಾಟ್ ಕೊಹ್ಲಿ ಕೂಡ ೨೦೨೨ ರ ಟಿ-೨೦ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಅಡಿಲೇಡ್ ಓವಲ್‌ನಲ್ಲಿ ಇಂಗ್ಲೆAಡ್ ವಿರುದ್ಧ ಕೊನೆಯದಾಗಿ ಚುಟುಕು ಕ್ರಿಕೆಟ್ ಪಂದ್ಯ ಆಡಿದ್ದಾರೆ.

ವಿಕೆಟ್ ಕೀಪರ್ ಸ್ಥಾನಕ್ಕೆ ಜಿತೇಶ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲಾಗಿದ್ದು, ಸ್ಪಿನ್ ಬೌಲರ್‌ಗಳಾದ ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್ ಮತ್ತು ಕುಲದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಅರ್ಷದೀಪ್ ಸಿಂಗ್, ಅವೇಶ್ ಖಾನ್ ಮತ್ತು ಮುಖೇಶ್ ಕುಮಾರ್, ತಂಡದಲ್ಲಿ ಸ್ಥಾನ ಪಡೆದ ವೇಗಿಗಳಾಗಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ-೨೦ ಪಂದ್ಯಗಳ ಸರಣಿಯ ಮೊದಲ ಪಂದ್ಯ ಜನವರಿ ೧೧ ರಂದು ಮೊಹಾಲಿಯಲ್ಲಿ ನಡೆಯಲಿದೆ.

ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಮೂರು ಟಿ-೨೦ ಪಂದ್ಯಗಳ ಸರಣಿಗೆ ಪ್ರಕಟಿಸಲಾದ ಭಾರತ ತಂಡ ಇಂತಿದೆ. ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್,ರವಿ ಬಿಷ್ಣೋಯ್, ಕುಲದೀಪ್ ಯಾದವ್ , ಅರ್ಷದೀಪ್ ಸಿಂಗ್,ಅವೇಶ್ ಖಾನ್, ಮುಖೇಶ್ ಕುಮಾರ್.

RELATED ARTICLES

LEAVE A REPLY

Please enter your comment!
Please enter your name here

Most Popular