ಮುಂಬೈ : ನಾನು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಶೀಘ್ರವೇ ಆಡಲು ಸಂಪೂರ್ಣವಾಗಿ ಅರ್ಹನಾಗುವೆ ಎಂದು ಭಾರತ ತಂಡದ ಪ್ರಮುಖ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಹೇಳಿದ್ದಾರೆ.
ಫೆಬ್ರವರಿ ೨೭, ಗುರುವಾರ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ನೆಟ್ಸ್ನಲ್ಲಿ ಬೌಲಿಂಗ್ ಮಾಡಲು ಪ್ರಾರಂಭಿಸಿರುವ ಬುಮ್ರಾ, ಇನ್‌ಸ್ಟಾಗ್ರಾಮ್‌ನಲ್ಲಿ ಬೌಲಿಂಗ್
ಮಾಡುತ್ತಿರುವ ವಿಡಿಯೋವನ್ನು ಬುಮ್ರಾ ಹಂಚಿಕೊಂಡಿದ್ದಾರೆ. ದಿನದಿಂದ ದಿನಕ್ಕೆ ನನ್ನಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಶೀಘ್ರವೇ ರಾಷ್ಟ್ರ ತಂಡವನ್ನು ಸೇರಿಕೊಳ್ಳುವ ವಿಶ್ವಾಸ ನನಗಿದೆ ಎಂದು ಬುಮ್ರಾ ಹೇಳಿಕೊಂಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಕೊನೆಯ ಸಿಡ್ನಿ ಟೆಸ್ಟ್ ಪಂದ್ಯದ ಸಮಯದಲ್ಲಿ ಅವರು ಕೆಳ ಬೆನ್ನಿನ ಗಾಯದಿಂದ ಬಳಲುತ್ತಿದ್ದರು. ಈ ಗಾಯದಿಂದಾಗಿ ಅವರು ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದರು.