Tuesday, October 21, 2025
Flats for sale
Homeರಾಜ್ಯಮುದ್ದೇಬಿಹಾಳ : ಬಸವೇಶ್ವರ ಜಾತ್ರೆ ವೇಳೆ ಬೈಕ್ ವ್ಹೀಲಿಂಗ್ : ನೋಡುತ್ತಾ ರಸ್ತೆ ಬದಿ ನಿಂತವರ...

ಮುದ್ದೇಬಿಹಾಳ : ಬಸವೇಶ್ವರ ಜಾತ್ರೆ ವೇಳೆ ಬೈಕ್ ವ್ಹೀಲಿಂಗ್ : ನೋಡುತ್ತಾ ರಸ್ತೆ ಬದಿ ನಿಂತವರ ಮೇಲೆ ಬೈಕ್ ಹರಿದ ಬೈಕ್, ಮೂವರು ಸ್ಥಳದಲ್ಲೇ ಸಾವು ..!

ಮುದ್ದೇಬಿಹಾಳ : ಯುವಕರಿಬ್ಬರ ಬೈಕ್ ವ್ಹೀಲಿಂಗ್ ಹುಚ್ಚಿಗೆ ಅವರೂ ಸೇರಿ ನಾಲ್ವರು ಬಲಿಯಾಗಿರುವ, ಇಬ್ಬರ ಸ್ಥಿತಿ ಗಂಭೀರವಾಗಿರುವ ಹೃದಯ ವಿದ್ರಾವಕ ಘಟನೆ ಗುರುವಾರ ಮಧ್ಯರಾತ್ರಿ ಕುಂಟೋಜಿ ಗ್ರಾಮದ ಹತ್ತಿರ ಮುದ್ದೇಬಿಹಾಳ-ತಾಳಿಕೋಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಎಲ್ಲರೂ ಯುವಕರೇ ಇದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರ್ವ ಬಾಗಲಕೋಟ ಜಿಲ್ಲಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬೆಳಗಿನ ಜಾವ ಮೃತನಾಗಿದ್ದಾನೆ. ಮೃತರೆಲ್ಲರೂ ಮಲಗಲದಿನ್ನಿ ಗ್ರಾಮದವರು ಎಂದು ಹೇಳಲಾಗಿದೆ. ಕುಂಟೋಜಿ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ನಡೆಯುತ್ತಿದೆ. ಜಾತ್ರೆಯ ಅಂಗವಾಗಿ ವಿವಿಧ ಶಕ್ತಿ ಪ್ರದರ್ಶನದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆ ನೋಡಲು ಸುತ್ತಲಿನ ಹಳ್ಳಿಗಳ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಇವರಲ್ಲಿ ಕೆಲವು ಯುವಕರು ರಸ್ತೆ ಪಕ್ಕದಲ್ಲಿ ಮೂತ್ರ ವಿಸರ್ಜಿಸುವಾಗ ವ್ಹೀಲಿಂಗ್ ಬೈಕ್ ಆಯತಪ್ಪಿ ಇವರೆಲ್ಲರಿಗೂ ವೇಗವಾಗಿ ಬಂದು ಗುದ್ದಿದೆ. ಪರಿಣಾಮ ಬೈಕ್ ಸವಾರರೂ ಸೇರಿ ಮೂವರು ತಲೆಗೆ ಭಾರೀ ಪೆಟ್ಟಾಗಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದರು. ನಾಲ್ವರಿಗೆ ಗಾಯಗಳಾಗಿದ್ದವು. ವಿಷಯ ತಿಳಿದ ಕೂಡಲೇ ಆರೋಗ್ಯ ಕವಚ ಅಂಬ್ಯೂಲೆನ್ಸ್ ಇಎಂಟಿ, ಚಲನಚಿತ್ರ ನಟರೂ ಆಗಿರುವ ಶ್ರೀಶೈಲ ಹೂಗಾರ ಸಿಬ್ಬಂದಿ ಸಮೇತ ಸ್ಥಳಕ್ಕೆ ಧಾವಿಸಿ‌ ಗಾಯಾಳುಗಳನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಕರೆತಂದು ದಾಖಲಿಸಿದರು. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದರಿಂದ ಬಾಗಲಕೋಟೆಗೆ ಕರೆದೊಯ್ಯಲಾಗಿತ್ತು. ಅವರಲ್ಲಿ ಒಬ್ಬ ಸಾವನ್ನಪ್ಪಿದ. ಇನ್ನೊಬ್ಬನ ಸ್ಥಿತಿಯೂ ಗಂಭೀರವಾಗಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಕಾನೂನು ಕ್ರಮ ಕೈಕೊಂಡಿದ್ದು ಪ್ರಕರಣ ದಾಖಲಾಗಿದೆ. ಮೃತರಲ್ಲಿ ಇಬ್ಬರನ್ನು ಮಲಗಲದಿನ್ನಿಯ ರಾಯಪ್ಪ ಬಾಗೇವಾಡಿ,
ಹಣಮಂತ್ರಾಯ ಕುರುಬಗೌಡ್ರ ಎಂದು ಗುರ್ತಿಸಲಾಗಿದೆ. ಇನ್ನಿಬ್ಬರು ಹೆಸರು ತಕ್ಷಣಕ್ಕೆ ತಿಳಿದುಬಂದಿಲ್ಲ.

RELATED ARTICLES

LEAVE A REPLY

Please enter your comment!
Please enter your name here

Most Popular