Friday, March 6, 2026
Flats for sale
Homeಜಿಲ್ಲೆಮೂಡುಬಿದಿರೆ : ಮೂಡಬಿದರೆ ತಾಲೂಕು ಪಂಚಾಯತ್‌ನ ಕಾರ್ಯಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಅವರನ್ನು ಆಹ್ವಾನಿಸದಕ್ಕೆ EO, PDO...

ಮೂಡುಬಿದಿರೆ : ಮೂಡಬಿದರೆ ತಾಲೂಕು ಪಂಚಾಯತ್‌ನ ಕಾರ್ಯಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಅವರನ್ನು ಆಹ್ವಾನಿಸದಕ್ಕೆ EO, PDO ಅಮಾನತು.

ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ತಾಲೂಕು ಪಂಚಾಯತ್‌ನ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಮುದ್ರಣದ ವೇಳೆ ಆರ್‌ಡಿಪಿಆರ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಹೆಸರನ್ನು ಉಲ್ಲೇಖಿಸದ ಹಾಗೂ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದ ಮೇಲೆ ಮೂಡುಬಿದಿರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (ಇಒ) ದಯಾವತಿ ಮತ್ತು ಇರುವೈಲ್‌ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕಂಠಪ್ಪ ಅವರನ್ನು ಅಮಾನತುಗೊಳಿಸಲಾಗಿದೆ. 

ಇಒ ಮತ್ತು ಪಿಡಿಒ ಅವರನ್ನು ಮಂಗಳವಾರದೊಳಗೆ ಅಮಾನತುಗೊಳಿಸಿದ ಆದೇಶವನ್ನು ಹಿಂಪಡೆಯದಿದ್ದರೆ ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಕೆ ಅವರ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಎಚ್ಚರಿಸಿದ್ದಾರೆ.

ಮೂಡುಬಿದಿರೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೋಟ್ಯಾನ್, ಡಿಸಿ ಕಚೇರಿ ಹೊರಡಿಸಿದ ಶಿಷ್ಟಾಚಾರದ ಪ್ರಕಾರ ಸೋಮವಾರ ನಿಗದಿಯಾಗಿದ್ದ ಇರುವೈಲ್ ಗ್ರಾಮ ಪಂಚಾಯಿತಿ ಕಟ್ಟಡದ ಉದ್ಘಾಟನೆಗೆ ಇಒ ಮತ್ತು ಪಿಡಿಒ ಇಬ್ಬರೂ ಆಹ್ವಾನ ಪತ್ರಿಕೆ ಮುದ್ರಿಸಿದ್ದಾರೆ.

ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಅವರ ಸಮ್ಮುಖದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನೂತನ ಪಂಚಾಯತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಎಂದು ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular