Friday, November 22, 2024
Flats for sale
Homeರಾಜ್ಯಮೈಸೂರು : ಅಜ್ಜಿ ತಿಥಿಗೆ ಬಂದಿದ್ದ ಒಂದೇ ಕುಟುಂಬದ ಮೂವರು ನೀರು ಪಾಲು.

ಮೈಸೂರು : ಅಜ್ಜಿ ತಿಥಿಗೆ ಬಂದಿದ್ದ ಒಂದೇ ಕುಟುಂಬದ ಮೂವರು ನೀರು ಪಾಲು.

ಮೈಸೂರು : ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಚಂಗೌಡನಹಳ್ಳಿ ಬಳಿಯ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ನೀರುಪಾಲಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಮೊದಲು ಯುವತಿಯೊಬ್ಬಳು ಕಾಲು ಜಾರಿ ನಾಲೆಗೆ ಬಿದ್ದಿದ್ದಾಳೆ. ಆಕೆಯನ್ನು ರಕ್ಷಿಸಲು ತಂದೆತಾಯಿಯೂ ನಾಲೆಗೆ ಜಿಗಿದಿದ್ದಾರೆ. ಯುವತಿಯನ್ನೂ ರಕ್ಷಿಸಾಗದೆ ಆಕೆಯ ತಂದೆ-ತಾಯಿ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೃತರನ್ನು ಮೊಹಮ್ಮದ್ ಖಲೀಫ್ (೪೨), ಶಾವರಾ ಭಾನು (೩೫) ಹಾಗೂ ಶಾಹಿರಾ ಭಾನು (೨೦) ಎಂದು ಗುರುತಿಸಲಾಗಿದೆ. ಮೊಹಮ್ಮದ್ಖ ಲೀಫ್ ಅವರ ತಾಯಿಯ ತಿಥಿ ಕಾರ್ಯಕ್ಕೆಂದು ಖಲೀಫ್ಕು ಟುಂಬಸ್ಥರು ಸರಗೂರು ಗ್ರಾಮಕ್ಕೆ ಆಗಮಿಸಿದ್ದರು. ತಿಥಿ ಕಾರ್ಯ ಮುಗಿಸಿ ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈಕಾಲು ತೊಳೆಯಲು ಹೋದಾಗ ಶಾಹಿರಾ ಭಾನು ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಈಕೆಯನ್ನು ರಕ್ಷಿಸಲು ಹೋದತಂದೆ ತಾಯಿಯು ಕೂಡ ನೀರುಪಾಲಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಯು ಬೋಟ್ ಮೂಲಕ ಮೂವರ ಶವಗಳನ್ನು ಹೊರತೆಗೆದಿದ್ದಾರೆ. ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular