ಮೈಸೂರು : ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಸಂಬಂಧ ಉದ್ವಿಗ್ನಗೊಂಡಿದ್ದ ಉದಯಗಿರಿ ಬಡಾವಣೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು , ಬಿಗಿ ಪೊಲೀಸ್ ಬಂದೋಬಸ್ತ್ ಮುAದುವರೆಸಲಾಗಿದೆ.
ಉದಯಗಿರಿ ಪೊಲೀಸ್ ಠಾಣೆಯ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲಿಸಿರುವ ಪೊಲೀಸರು, 70 ಕ್ಕೂ ಹೆಚ್ಚು ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನಾ ಸ್ಥಳದಲ್ಲಿ ಆರಕ್ಕೂ ಹೆಚ್ಚು ಕೆಎಸ್‌ಆರ್‌ಪಿ ತುಕಡಿಗಳು ಹಾಗೂ ಎಂಟಕ್ಕೂ ಹೆಚ್ಚು ಪೊಲೀಸ್ ಇನ್ಸ್ಪೆಕ್ಟರ್ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಈ ನಡುವೆ ಮುಷ್ತಾಕ್ ಮಕ್ಬೋಲಿ ಎಂಬಾತ ಸೋಷಿಯಲ್ ಮೀಡಿಯಾದಲ್ಲಿ ನಿರಂತರವಾಗಿ ಪ್ರಚೋದನಕಾರಿ ವಿಡಿಯೋ ಹಂಚಿದ್ದು, ಇದು ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಮತ್ತಷ್ಟು ಗೊಂದಲ ಸೃಷ್ಟಿಮಾಡುತ್ತಿದೆ. ಹೀಗಾಗಿ ಪೊಲೀಸರು ಅಲರ್ಟ್ ಆಗಿದ್ದು, ಮಕ್ಬೋಲಿ ಬಂಧನಕ್ಕೆ ಬಲೆ ಬೀಸಿದ್ದಾರೆ. ಮುಸ್ಲಿಮರನ್ನು ಗುರಿ ಮಾಡಲಾಗುತ್ತಿದೆ. ಎಲ್ಲರೂ ಒಗ್ಗಟ್ಟಾಗಿ ನಿಲ್ಲಿ. ಸುರೇಶ್ ಹೆಸರಿನ ಹರಾಮಿ ನನ್ನ ಮಾಲೀಕನ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾನೆ. ಆತನನ್ನು ಕೂಡಲೇ ಬಂಧಿಸಿ. ಆತನನ್ನು ನೇಣಿಗೆ ಹಾಕಬೇಕು, ಮರಣದಂಡನೆ ವಿಧಿಸಬೇಕು’ ಎಂದು ವಿಡಿಯೋದಲ್ಲಿ ಹೇಳಲಾಗಿದೆ.
ಎನ್ ರಾಜಣ್ಣ ಹೇಳಿರುವ ಮಾತಿಗೆ ಸಿಎಂ ಸಿದ್ದರಾಮಯ್ಯ ಅವರು ಉತ್ತರಿಸುತ್ತಾರೆ. ಸಿಎಂಗೆ ಸದ್ಯಕ್ಕೆ ಮಾತನಾಡಲು ಆಗುತ್ತಿಲ್ಲ. ೮ ರಿಂದ ೧೦ ದಿನದಲ್ಲಿ ಮುಖ್ಯಮಂತ್ರಿಗಳೇ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ಕೊಡುತ್ತಾರೆ ಎಂದರು.