Wednesday, August 12, 2026
Homeರಾಜ್ಯಮೈಸೂರು : ಒಂದೇ ಕುಟುಂಬದ ಮೂವರು ಆತ್ಮಹತ್ಯೆ ; ಡೆತ್ ನೋಟ್‌ನಲ್ಲಿ ಕಿರುಕುಳ ಆರೋಪ.

ಮೈಸೂರು : ಒಂದೇ ಕುಟುಂಬದ ಮೂವರು ಆತ್ಮಹತ್ಯೆ ; ಡೆತ್ ನೋಟ್‌ನಲ್ಲಿ ಕಿರುಕುಳ ಆರೋಪ.

ಮೈಸೂರು : ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಶಿವಣ್ಣ, ಅವರ ಪತ್ನಿ ನಾಗರತ್ನ ಹಾಗೂ ಪುತ್ರಿ ರಕ್ಷಿತಾ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದವರು. ಮೃತ ರಕ್ಷಿತಾಗೆ ಮದುವೆ ನಿಶ್ಚಯವಾಗಿದ್ದು, ಗ್ರಾಮದ ಉಲ್ಲಾಸ್ ಗೌಡ ಎಂಬಾತನ ಕಿರುಕುಳ ಮತ್ತು ಮಾನಸಿಕ ಹಿಂಸೆಯಿಂದ ಬೇಸತ್ತು ಈ ಕೃತ್ಯ ಎಸಗಿರುವುದಾಗಿ ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ರಕ್ಷಿತಾ ಕಳುಹಿಸಿದ್ದ ಕೆಲವು ಸಂದೇಶಗಳು ಹಾಗೂ ಫೋಟೋಗಳನ್ನು ಇಟ್ಟುಕೊಂಡು ಉಲ್ಲಾಸ್ ಗೌಡ ಕಿರುಕುಳ ನೀಡುತ್ತಿದ್ದನು. ಅಲ್ಲದೆ, ರಕ್ಷಿತಾಳೊಂದಿಗೆ ನಿಶ್ಚಿತಾರ್ಥವಾಗಿದ್ದ ಯುವಕನಿಗೂ ಆ ಸಂದೇಶಗಳು ಮತ್ತು ಫೋಟೋಗಳನ್ನು ಕಳುಹಿಸಿದ್ದಾನೆ ಎನ್ನಲಾಗಿದೆ.

ಈ ಬೆಳವಣಿಗೆಯಿಂದ ಮನನೊಂದ ಕುಟುಂಬದ ಮೂವರು ತಮ್ಮ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರ ಸಾವಿಗೂ ಉಲ್ಲಾಸ್ ಗೌಡನೇ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಟಿ. ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular