Wednesday, November 5, 2025
Flats for sale
Homeರಾಜಕೀಯಮೈಸೂರು : ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದು ಪ್ರದೀಪ್ ಈಶ್ವರ್​ ಹೇಳಿಕೆಗೆ ತಿರುಗೇಟು...

ಮೈಸೂರು : ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದು ಪ್ರದೀಪ್ ಈಶ್ವರ್​ ಹೇಳಿಕೆಗೆ ತಿರುಗೇಟು ನೀಡಿದ ಪ್ರತಾಪ್ ಸಿಂಹ.

ಮೈಸೂರು : ಕಾಂಗ್ರೆಸ್ ಯುವನಾಯಕ ಪ್ರದೀಪ್ ಈಶ್ವರ್ ಹಾಗೂ ಪ್ರತಾಪ್ ಸಿಂಹ ರವರ ನಡುವಿನ ಕೌಂಟರ್ ಮಾತುಗಳು ದಿನಕೊಂದು ಏಟು ತಿರುಗೇಟಿನ ಮಾತುಗಳು ಬರುತಿದ್ದು ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ರವರು ಮಾತನಾಡಿ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದು ಹೇಳುವ ಮೂಲಕ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ತನ್ನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಕೌಂಟರ್ ಕೊಟ್ಟಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಈ ಭಾರಿ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದರು. ಇದರಿಂದ ಮೈಸೂರು-ಕೊಡಗು ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ಸುಳಿವು ನೀಡಿದ್ದು ಲೋಕಸಭೆ ಚುನಾವಣೆಯಲ್ಲಿ ಯತೀಂದ್ರ ಅವರ ಗೆಲುವು ನಿಶ್ಚಿತ ಎಂದು ಸುಳಿವು ನೀಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಈ ಭಾರಿ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದರು. ಇದರಿಂದ ಮೈಸೂರು-ಕೊಡಗು ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ಸುಳಿವು ನೀಡಿದ್ದು ಲೋಕಸಭೆ ಚುನಾವಣೆಯಲ್ಲಿ ಯತೀಂದ್ರ ಅವರ ಗೆಲುವು ನಿಶ್ಚಿತ ಎಂದು ಹೇಳುವ ಮೂಲಕ ಪ್ರದೀಪ್ ಈಶ್ವರ್ ಸಂಸದ ಪ್ರತಾಪ್ ಸಿಂಹ ಅವರಿಗೆ ಕೌಂಟರ್ ಕೊಟ್ಟಿದ್ದರು.

ಈ ಬಗ್ಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ ನಾನು ತಿಳಿಗೇಡಿಯಲ್ಲ, ನಾನು ಆ ಕೊಚ್ಚೆಗೆ ಯಾವತ್ತೂ ಕಲ್ಲು ಹಾಕಲ್ಲ ಎಂದರು. ತಿಳಿಗೇಡಿಗಳು ಮಾತ್ರ ಕೊಚ್ಚೆಗೆ ಕಲ್ಲು ಹಾಕುತ್ತಾರೆ‌. ಎಂದು ಹೇಳುವ ಮೂಲಕ ಪ್ರದೀಶ್ ಈಶ್ವರ್ ಹೇಳಿಕೆಗಳಿಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದರು.ಚುನಾವಣೆಯಲ್ಲಿ ಯತೀಂದ್ರ ಅವರು ಪ್ರತಿಸ್ಪರ್ಧಿಯಾದರೆ ಉತ್ತಮ ಎಂದರು. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ. ನನ್ನ ಪರ ಎರಡು ಪಕ್ಷದ (ಬಿಜೆಪಿ-ಜೆಡಿಎಸ್) ನಾಯಕರ ಆಶೀರ್ವಾದವಿದೆ ಎಂದು ಹೇಳಿದ್ದಾರೆ.

ರಾಮ ಜನ್ಮಭೂಮಿಗಾಗಿ ಎಲ್​ಕೆ ಅಡ್ವಾಣಿ ರಥಯಾತ್ರೆ ಮಾಡಿದ್ದರು. ರವಿಶಂಕರ್ ಪ್ರಸಾದ್ ಕಾನೂನು ಹೋರಾಟ ಮಾಡಿದವರು. ಪ್ರಧಾನಿ ಮೋದಿ ಅವರು ದೇಶಾದ್ಯಂತ ಜಾಗೃತಿ ಮೂಡಿಸಿದವರು. ಅಡ್ವಾಣಿಯಿಂದ ಮೋದಿವರೆಗೆ ರಾಮ ಜನ್ಮಭೂಮಿ ವಿಚಾರದಲ್ಲಿ ಬಿಜೆಪಿಯ ಪಾತ್ರ ದೊಡ್ಡದಿದೆ. ಆದರೆ ಕಾಂಗ್ರೆಸ್ ಪಕ್ಷದ ಯಾವ ಪಾತ್ರವೂ ಇಲ್ಲ. ಹೀಗಾಗಿ ಅವರಿಗೆ ಅಪರಾಧಿ ಪ್ರಜ್ಞೆ ಇದೆ. ಈ ಕಾರಣಕ್ಕೆ ಅವರು ಉದ್ಘಾಟನೆಯಿಂದ ಹಿಂದೆ ಸರಿದಿದ್ದಾರೆ ಎಂದರು.ರಾಮನ ಅಸ್ತಿತ್ವವನ್ನೇ ಪ್ರಶ್ನೆ ಮಾಡಿದ ಕಾಂಗ್ರೆಸ್​ನ ಪಾಪ ತೊಳೆದುಕೊಳ್ಳಲು ಸಿದ್ದರಾಮಯ್ಯ ಅವರು ತಮ್ಮ ಶಿಷ್ಯರ ಜೊತೆ ಅಯೋಧ್ಯೆಗೆ ಹೋಗಿ ಬರಲಿ ಎಂದರು. ಅಡ್ವಾಣಿಯಿಂದ ಮೋದಿವರೆಗೆ ರಾಮ ಜನ್ಮಭೂಮಿ ವಿಚಾರದಲ್ಲಿ ಬಿಜೆಪಿಯ ಪಾತ್ರ ದೊಡ್ಡದಿದೆ. ಆದರೆ ಕಾಂಗ್ರೆಸ್ ಪಕ್ಷದ ಯಾವ ಪಾತ್ರವೂ ಇಲ್ಲ. ಹೀಗಾಗಿ ಅವರಿಗೆ ಅಪರಾಧಿ ಪ್ರಜ್ಞೆ ಇದೆ. ಈ ಕಾರಣಕ್ಕೆ ಅವರು ಉದ್ಘಾಟನೆಯಿಂದ ಹಿಂದೆ ಸರಿದಿದ್ದಾರೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular