Tuesday, August 4, 2026
Homeರಾಜ್ಯಮೈಸೂರು : ಚಾಮುಂಡಿ ಬೆಟ್ಟದಲ್ಲಿ ವರ್ಧಂತಿ ಸಂಭ್ರಮ : ಹೂವಿನ ಅಲಂಕಾರದಲ್ಲಿ ಮಿನುಗಿದ ದೇವಾಲಯ.

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ವರ್ಧಂತಿ ಸಂಭ್ರಮ : ಹೂವಿನ ಅಲಂಕಾರದಲ್ಲಿ ಮಿನುಗಿದ ದೇವಾಲಯ.

ಮೈಸೂರು : ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ವರ್ಧಂತಿ ಹಬ್ಬದ ಅಂಗವಾಗಿ ಇಂದು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ಬೆಳಗ್ಗೆ 5 ಗಂಟೆಯಿಂದಲೇ ದೇವಿಗೆ ಅಭಿಷೇಕ ಹಾಗೂ ವಿಶೇಷ ಪೂಜೆಗಳು ನೆರವೇರಿದವು. ವರ್ಧಂತಿ ಪ್ರಯುಕ್ತ ದೇವಸ್ಥಾನವನ್ನು ತೆಂಗಿನ ಗರಿ, ಕಬ್ಬು ಹಾಗೂ ವಿವಿಧ ಬಗೆಯ ಹೂವುಗಳಿಂದ ಅದ್ಧೂರಿಯಾಗಿ ಅಲಂಕರಿಸಲಾಗಿದ್ದು, ಭಕ್ತರನ್ನು ಆಕರ್ಷಿಸುವಂತೆ ಸಿಂಗಾರ ಮಾಡಲಾಗಿದೆ.

ವಿಶೇಷ ಪೂಜೆಗಳ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 8 ಗಂಟೆಯವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಬಳಿಕ ಬೆಳಗ್ಗೆ 8.30 ಗಂಟೆಯಿಂದ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ವರ್ಧಂತಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಯ ಆಶೀರ್ವಾದ ಪಡೆಯುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular