ಮೈಸೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಅನ್ನು ಅಧಿಕಾರಕ್ಕೆ ತರುವುದಾಗಿ ಪಣ ತೊಟ್ಟಿರುವ ಅವರು, ಸಾಮಾನ್ಯರನ್ನು ತಲುಪಲು ಮನೆ-ಮನೆ ಪ್ರಚಾರವನ್ನು ತೀವ್ರಗೊಳಿಸುವಂತೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಗೆ ಕರೆ ನೀಡಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಇತರ ನಾಯಕರು ಈಗಾಗಲೇ ರಾಜ್ಯದಾದ್ಯಂತ ಪಂಚರತ್ನ ರಥಯಾತ್ರೆಯನ್ನು ಪ್ರಾರಂಭಿಸಿದ್ದು, ಪಕ್ಷದ ಪ್ರತಿ ನಾಯಕರಿಗೆ ಪ್ರತಿ ಹಳ್ಳಿಯ ಜವಾಬ್ದಾರಿಯನ್ನು ನೀಡಲಾಗಿದೆ’ ಎಂದು ಅವರು ಹೇಳಿದರು.
ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು 2023ರ ಜನವರಿಯಿಂದ ಚುನಾವಣಾ ಪ್ರಚಾರ ಆರಂಭಿಸುವುದಾಗಿ ಗುರುವಾರ ಘೋಷಿಸಿದ್ದಾರೆ.
ಪಕ್ಷದ ನಾಯಕರು, ಶಾಸಕರು ಮತ್ತು ಮಾಜಿ ಶಾಸಕರಿಗೂ ಜವಾಬ್ದಾರಿಗಳನ್ನು ನೀಡಲಾಗಿದೆ ಎಂದ ದೇವೇಗೌಡರು, ಪಕ್ಷವು ಪ್ರಕಟಿಸಿದ ಮೊದಲ ಪಟ್ಟಿ ಇನ್ನೂ ಅಂತಿಮವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರತಿದಿನ ಪಟ್ಟಿಯನ್ನು ಪರಿಶೀಲಿಸಲಾಗುವುದು. ಪ್ರತಿದಿನ ಸಮೀಕ್ಷೆಗಳನ್ನು ನಡೆಸಲಾಗುತ್ತದೆ. ಭಿನ್ನಾಭಿಪ್ರಾಯ ಹೊಂದಿರುವ ನಾಯಕರು ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಿದರು.