ಮೈಸೂರು : ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ ಚಾಮುಂಡಿ ಬೆಟ್ಟದಿಂದ ಅರಮನೆಯತ್ತ ಉತ್ಸವ ಮೂರ್ತಿ ರಸ್ತೆಯ ಮೂಲಕ ಚಿನ್ನದ ಅಂಬಾರಿಯಲ್ಲಿ ವಿರಾಜಮಾನ ಶ್ರೀ ಚಾಮುಂಡೇಶ್ವರಿ ದೇವಿ ವಿಗ್ರಹ ಅರಮನೆಗೆ ಬಂದಿಳಿದಿದೆ.
ಚಾಮುಂಡಿ ಬೆಟ್ಟದಲ್ಲಿ ದೇವಿ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಿದ್ದೂ
ಪೂಜೆ ಸಲ್ಲಿಸಿದ ಬಳಿಕ ಅಲಂಕೃತ ವಾಹನದಲ್ಲಿ ಉತ್ಸವಮೂರ್ತಿ ಅರಮನೆಗೆ ಬಂದಿದೆ. ಈ ಸಂದರ್ಭದಲ್ಲಿ ಪ್ರಧಾನ ಅರ್ಚಕರಾದ ಶಶಿಶೇಖರ ದೀಕ್ಷಿತ್ ರವರು ಉತ್ಸವ ಮೂರ್ತಿ ಜೊತೆ ಆಗಮಿಸಿದ್ದರು.


