ಮೈಸೂರು : ನಾಳೆ ವಿಜಯದಶಮಿಯ ಮೊದಲ ದಿನದ ಹಿನ್ನೆಲೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ನಡೆಯಲಿದೆ.

ದಸರಾ ಉದ್ಘಾಟನೆಗೆ ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ ನಡೆದಿದ್ದು ಅರ್ಚಕರು ಚಾಮುಂಡೇಶ್ವರಿ ಉತ್ಸವ ಮೂರ್ತಿ ಶುಚಿಗೊಳಿಸಿ ಸಿದ್ಧತೆ ಮಾಡಿಕೊಂಡಿದ್ದಾರೆ.
ಹಸಿರು ಸೀರೆಯುಡಿಸಿ ಉತ್ಸವ ಮೂರ್ತಿಯನ್ನು ಹಂಸವಾಹಿಸಿ ಅಲಂಕಾರ ಮಾಡಿದ್ದು ನಾಳೆ 10:40ರ ವೃಶ್ಚಿಕ ಶುಭ ಲಗ್ನದಲ್ಲಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.
ಲೇಖಕಿ ಭಾನುಮುಸ್ತಾಕ್ ರಿಂದ ದಸರಾ ಉದ್ಘಾಟನೆ ಯಾಗಲಿದ್ದು ಮುಂಜಾನೆಯಿಂದಲೇ ವಿವಿಧ ಅಭಿಷೇಕ, ಪೂಜಾಕೈಂಕರ್ಯ ನಡೆಯಲಿದೆ.
ಬಳಿಕ ಬೆಳ್ಳಿರಥಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನ ವೇದಿಕೆಗೆ ತಂದು ಪುಷ್ಪಾರ್ಚನೆ ಮಾಡಲಿದ್ದಾರೆಂದು ಚಾಮುಂಡೇಶ್ವರಿ ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ರವರು ಮಾಹಿತಿ ನೀಡಿದ್ದಾರೆ.