ಮೈಸೂರು : ನಿಜವಾದ ಪ್ರೀತಿ ಅಂದರೆ ಇಷ್ಟೇ ಇಬ್ಬರ ನಡುವೆ ಮನಸ್ತಾಪ ಉಂಟಾದರೆ ಒಬ್ಬರಿಗೊಬ್ಬರು ಬಿಟ್ಟು ಇರುವಂತಹ ಪರಿಸ್ಥಿತಿ.ಎಷ್ಟೇ ಗಲಾಟೆ ಮಾಡಿದರೂ ಮತ್ತೆ ಒಂದಾಗ್ತಾರೆ.ಇದೀಗ ಇಬ್ಬರ ನಡುವೆ ಸಣ್ಣ ಗಲಾಟೆ ಆಗಿದೆ.ಇದರಿಂದ ಬೇಸತ್ತ ಮೋನಿಕಾ ದಟ್ಟಗಳ್ಳಿಯ ಕೆಲಸ ಮಾಡುತ್ತಿದ್ದ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾಳೆ. ವಿಷಯ ತಿಳಿದ ಮನು ಸ್ಥಳಕ್ಕೆ ಧಾವಿಸಿ ಮೋನಿಕಾಳನ್ನ ಆಸ್ಪತ್ರೆಗೆ ಕರೆತಂದಿದ್ದಾನೆ. ಆದ್ರೆ ಮೋನಿಕಾ ಮೃತಪಟ್ಟಿದ್ದಾಳೆ. ಮೋನಿಕಾ ಸಾವಿಗೆ ಮನನೊಂದ ಮನು ತಾನೂ ಸಹ ಜ್ಯೋತಿನಗರದ ಮನೆಯಲ್ಲಿ ನೇಣಿಗೆ ಶರಣಾದ ಹೃದಯವಿದೃಹಕ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಮಂಡಕಳ್ಳಿಯಲ್ಲಿ ಮೋನಿಕಾ, ಜ್ಯೋತಿನಗರದ ಮನು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಇಬ್ಬರ ಮಧ್ಯ ಬಂದ ಒಂದು ಮನಸ್ತಾಪಕ್ಕೆ ಇದೀಗ ಈ ಜೋಡಿ ಸಾವಿಗೆ ಶರಣಾಗಿದೆ.
ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಮೈಸೂರಿನ ಜ್ಯೋತಿನಗರದ ಮನು ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯಲ್ಲಿ ಇಬ್ಬರಿಗೂ ಮದುವೆ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದರು. ಏನೋ ಸಣ್ಣ ಮನಸ್ತಾಪದಿಂದ ಮೋನಿಕಾ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರೇಯಸಿಯ ಸಾವಿನ ಸುದ್ದಿ ತಿಳಿದು ಇತ್ತ ಪ್ರಿಯಕರ ಮನು ಜ್ಯೋತಿನಗರದ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಒಟ್ಟಿನಲ್ಲಿ ಈ ಪ್ರೀತಿಯಿಂದಾಗಿ ತಂದೆ ತಾಯಂದಿರು ಇಬ್ಬರು ಮಕ್ಕಳನ್ನು ಕಳೆದುಕೊಂಡಂತಾಗಿದೆ.


