Thursday, July 23, 2026
Homeರಾಜ್ಯಮೈಸೂರು : ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರು ತಮ್ಮ ಮಕ್ಕಳು,ಗಂಡಂದಿರನ್ನು ಕಳೆದುಕೊಳ್ಳುತ್ತಾರೆ : ಸಿಎಂ ಪುತ್ರ...

ಮೈಸೂರು : ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರು ತಮ್ಮ ಮಕ್ಕಳು,ಗಂಡಂದಿರನ್ನು ಕಳೆದುಕೊಳ್ಳುತ್ತಾರೆ : ಸಿಎಂ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ!

ಮೈಸೂರು : ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಚುನಾವಣೆ ಪ್ರಚಾರದ ನಿಮಿತ್ತ ಮಾತನಾಡಿದ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ಕೋಮುಗಲಭೆ, ದೊಂಬಿ ಮಾಡುತ್ತಾರೆ,ಒಬ್ಬರನ್ನೊಬ್ಬರು ಬಡಿದಾಡಿಕೊಳ್ಳುವಂತೆ ಮಾಡುತ್ತಾರೆ,ಮಹಿಳೆಯರು ತಮ್ಮ ಗಂಡಂದಿರು, ಮಕ್ಕಳನ್ನು ಸಹ ಕಳೆದುಕೊಳ್ಳುವಂತೆ ಮಾಡುತ್ತಾರೆ,ಗಲಾಟೆ ಮಾಡಿ ಮಕ್ಕಳನ್ನು ಸಾಯುವಂತೆ ಮಾಡುತ್ತಾರೆ,ಬಿಜೆಪಿಯವರು ಸಮಾಜವನ್ನು ಅಧಃಪತನಕ್ಕೆ ಹೋಗುವಂತೆ ಮಾಡುತ್ತಾರೆ. ಮಕ್ಕಳನ್ನು ಕೋಮುಗಲಭೆಯಲ್ಲಿ ತೊಡಗಿಸಿ ನಿರುದ್ಯೋಗಿಗಳನ್ನಾಗಿ ಮಾಡುತ್ತಾರೆ. ಮತೀಯ ಭಾವನೆ ಕೆರಳಿಸುವ ರೀತಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಎಂದು ಹೇಳಿದ್ದಾರೆ.

ಚುನಾವಣಾ ಆಯೋಗ ಯಾಕೆ ಕಣ್ಮುಚ್ಚಿ ಕುಳಿತಿದೆಯೋ ಗೊತ್ತಿಲ್ಲ,ರಾಜ್ಯದಲ್ಲಿ 70 ವರ್ಷಗಳಿಂದ ವಿವಿಧ ಪಕ್ಷಗಳು ಆಡಳಿತ ನಡೆಸಿವೆ. ಹಿಂದುಗಳಿಗೆ ಈವರೆಗೆ ಯಾವುದೇ ಅನ್ಯಾಯ ಆಗಿಲ್ಲ,ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಯೂ ಈ ರೀತಿ ಮಾತನಾಡುವುದು ಸರಿಯಿಲ್ಲ,ಮತೀಯ ಭಾವನೆ ಕೆರಳಿಸುವ ರೀತಿ ಸರಿಯಿಲ್ಲವೆಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular