ಮೈಸೂರು : ರಾಜಕೀಯ ಅಂದರೆ ಇಷ್ಟೇ ಯಾವಾಗ ವಿರೋದಿಯಾಗ್ತಾರೆ ,ಯಾವಾಗ ಜೊತೆಯಾಗ್ತಾರೆಂಬುದು ತಿಳಿಯುವುದು ಸ್ವಲ್ಪ ಕಷ್ಟದ ಸಂಗತಿ. ಮೈಸೂರಿನಲ್ಲಿ ಸಿದ್ದರಾಮಯ್ಯ ಕಳೆದ ಹಲವು ದಿನಗಳಿಂದ ಬೀಡುಬಿಟ್ಟಿದ್ದು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಇಲ್ಲಸಲ್ಲದ ಕಸರತ್ತು ಮಾಡುವುದಂತೂ ನಿಜ.ಕಳೆದ 8 ವರ್ಷಗಳ ಬಳಿಕ ಸಿಎಂ ಸಿದ್ದರಾಮಯ್ಯ- ಶ್ರೀನಿವಾಸ ಪ್ರಸಾದ್ ಒಂದಾಗಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಬೆಳವಣಿಗೆಯಾಗಿದ್ದು,ಮೈಸೂರಿನಲ್ಲಿ ದಿಗ್ಗಜ ನಾಯಕರ ಮಹಾಸಂಗಮವಾಗಿದೆ.
ಲೋಕಸಭಾ ಚುನಾವಣೆಗೆ ಚರಾಮರಾಜನಗರದಿಂದ ಈಗಾಗಲೇ ಡಾ.ಎಚ್.ಸಿ.ಮಹದೇವಪ್ಪ, ಪುತ್ರ ಸುನೀಲ್ ಬೋಸ್,ಸುನೀಲ್ ಬೋಸ್ ಸ್ಪರ್ಧಿಸಿರುವುದರಿಂದ ಮೈಸೂರಿನ ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ನೀವು ಕಾಂಗ್ರೆಸ್ನಲ್ಲಿ ಇದ್ದವರು ಕಾಂಗ್ರೆಸ್ ಬಗ್ಗೆ ಸಿಂಪಥಿ ಇರಲಿ ಎಂದು ಹೇಳಿದ್ದೇನೆ. ಸುಧೀರ್ಘವಾಗಿ ರಾಜಕೀಯದ ಬಗ್ಗೆ ಚರ್ಚೆ ಮಾಡಿಲ್ಲ.ಅವರು ರಾಜಕೀಯವಾಗಿ ನಿವೃತ್ತಿ ತೆಗೆದುಕೊಂಡಿದ್ದಾರೆ. ಹೀಗಾಗಿ ರಾಜಕೀಯದ ಬಗ್ಗೆ ಹೆಚ್ಚು ಏನು ಮಾತನಾಡಿಲ್ಲ. ಅವರು ನಮ್ಮ ಹಳೆಯ ಸ್ನೇಹಿತರು. ರಾಜಕೀಯವಾಗಿ ಅವರು ಬಿಜೆಪಿಗೆ ಹೋಗಿದ್ದರು. ಈಗ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ ಅಷ್ಟೇ. ಶ್ರೀನಿವಾಸ್ ಪ್ರಸಾದ್ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಳೆದ ಏಳೆಂಟು ವರ್ಷಗಳ ರಾಜಕೀಯ ವೈಷಮ್ಯ ಮರೆಯುವಂತೆ ಮನವಿ ಮಾಡಿರುವುದು ಶ್ರೀನಿವಾಸ ಪ್ರಸಾದ್ ರಾಜಕೀಯ ನಿವೃತ್ತ ಸಂದರ್ಭದಲ್ಲಿ ಅವರನ್ನ ಗೌರವಿಸುವ ನೆಪದಲ್ಲಿ ಶ್ರೀನಿವಾಸ ಪ್ರಸಾದ್ ಕುಟುಂಬಕ್ಕೆ ಟಿಕೆಟ್ ಕೈತಪ್ಪಿರುವುದರಿಂದ ಹಾಗೂ ಬಿಜೆಪಿ ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದಾರೆ ಎಂಬ ರಾಜಕೀಯ ಉದ್ದೇಶದಿಂದ ಮುಂದೆ ಅಳಿಯಂದಿರು, ಮೊಮ್ಮಕ್ಕಳ ರಾಜಕಾರಣಕ್ಕೆ ತೊಂದರೆ ಆಗುತ್ತದೆ ಎಂಬ ಮನವರಿಕೆ ಮಾಡಲು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಗೆಲ್ಲಿಸಿಕೊಳ್ಳಲು,ಮೈಸೂರು-ಚಾಮರಾಜನಗರ ಭಾಗದಲ್ಲಿ ಪ್ರಸಾದ್ ಅಭಿಮಾನಿಗಳ ಕಾಂಗ್ರೆಸ್ ನತ್ತ ಸೆಳೆಯಲು ,ಕಾಂಗ್ರೆಸ್ ಪಕ್ಷದಲ್ಲಿ ಮುಂಬರುವ ದಿನಗಳಲ್ಲಿ ಪ್ರಸಾದ್ ಅಳಿಯಂದಿರು ಹಾಗು ಕುಟುಂಬದವರಿಗೆ ಅವಕಾಶ ಕಲ್ಪಿಸುವ ಭರವಸೆಯೊಂದಿಗೆ ಹಳೆಯ ದೋಸ್ತಿಗಳ ಮಹಾಸಂಗಮವಾಗಿದೆ ಎಂದು ತಿಳಿದುಬಂದಿದೆ.
ಮೈಸೂರಿನಲ್ಲಿ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿದ್ದು, ಕಾಂಗ್ರೆಸ್ಗೆ ಬಿಜೆಪಿಯ ಪ್ರಭಾವಿ ದಲಿತ ನಾಯಕನ ಬೆಂಬಲವನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದು ಈಗ ರಾಜಕೀಯ ಸಂಚಲನಕ್ಕೂ ಕಾರಣವಾಗಿದೆ. ಅಷ್ಟೇ ಅಲ್ಲ, ಸಿದ್ದರಾಮಯ್ಯ ಜತೆ ಮಾತುಕತೆ ನಡೆಸಿದ ಬೆನ್ನಲ್ಲೇ, “ಭಾನುವಾರ ನಡೆಯುವ ಮೋದಿ ಸಮಾವೇಶಕ್ಕೆ ನಾನು ಹೋಗುವುದಿಲ್ಲ” ಎಂದು ಶ್ರೀನಿವಾಸ ಪ್ರಸಾದ್ ಅವರು ಹೇಳಿರುವುದು ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದೆ.“ಶ್ರೀನಿವಾಸ ಪ್ರಸಾದ್ ಅವರ ಬೆಂಬಲ ನಮಗಿದೆ” ಎಂಬುದಾಗಿ ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ಕೂಡ ಬಹಿರಂಗವಾಗಿ ಹೇಳಿದ್ದು ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುನೀಲ್ ಬೋಸ್, “ಶ್ರೀನಿವಾಸ ಪ್ರಸಾದ್ ಅವರ ಸಂಪೂರ್ಣ ಬೆಂಬಲ ಕಾಂಗ್ರೆಸ್ಗೆ ಇದೆ. ಬಿಜೆಪಿ ಸಂಸದರ ಆಶೀರ್ವಾದ ಪಡೆದಿದ್ದೇನೆ. ಗೆದ್ದು ಬಾ ಎಂದು ಅವರು ನನಗೆ ಆಶೀರ್ವಾದ ಮಾಡಿದ್ದಾರೆ. ಅವರ ಬೆಂಬಲಿಗರು ಕೂಡ ಕಾಂಗ್ರೆಸ್ ಸೇರಿದ್ದಾರೆ. ಹಾಗಾಗಿ ನಮ್ಮ ಗೆಲುವು ನಿಶ್ಚಿತ” ಎಂಬುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


