Friday, June 26, 2026
Homeರಾಜ್ಯಮೈಸೂರು ; ಮಿನಿ ಬಸ್ ಪಲ್ಟಿ ಹತ್ತು ಮಂದಿಗೆ ಗಾಯ.

ಮೈಸೂರು ; ಮಿನಿ ಬಸ್ ಪಲ್ಟಿ ಹತ್ತು ಮಂದಿಗೆ ಗಾಯ.

ಮೈಸೂರು ; ಗುರುವಾರ ಬೆಳಗ್ಗೆ ನಂಜನಗೂಡು-ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ಮಿನಿ ಬಸ್ಸೊಂದು ಮೋಟಾರುಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಹತ್ತು ಮಂದಿ ಪ್ರವಾಸಿಗರು ಗಾಯಗೊಂಡಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯ 21 ಮಂದಿ ಮಿನಿಬಸ್‌ನಲ್ಲಿ ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರವಾಸಕ್ಕೆ ಬಂದಿದ್ದರು. ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ದರ್ಶನ ಮುಗಿಸಿ ಮೈಸೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ ಹತ್ತು ಜನರ ಕೈ ಮತ್ತು ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ನಂಜನಗೂಡು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular