ಮೈಸೂರು :ದೇಶದಲ್ಲಿ ಇನ್ನೇನು ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು ಬಿಜೆಪಿ ಚಾಣಕ್ಯ ಎಂದೇ ಹೆಸರಾಗಿರುವ ದೇಶದ ಕೇಂದ್ರ ಗೃಹ ಸಚಿವ, ಅಮಿತ್ ಶಾ ಅವರು ಭಾನುವಾರ ನಸುಕಿನ ಜಾವವೇ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ನಸುಕಿನ ಜಾವ 3 ಗಂಟೆಗೆ ಹೊತ್ತಿಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ ಅಮಿತ್ ಶಾ, ಇಲ್ಲಿಂದ ರಸ್ತೆ ಮಾರ್ಗದ ಮೂಲಕ ಱಡಿಸನ್ ಬ್ಲೂ ಹೋಟೆಲ್ ಗೆ ತೆರಳಿ ಅಲ್ಲಿ ವಾಸ್ತವ್ಯ ಹೂಡಿದರು. ಸದ್ಯ ಹೊಟೇಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಅಮಿತ್ ಶಾ ರವರ ಕಾರು ಅವರು ಆಗಮಿಸುವ ಮೊದಲು ಮೈಸೂರು-ನಂಜನಗೂಡು ರಸ್ತೆ ಮಧ್ಯೆ ಹಾಕಲಾಗಿದ್ದ ಬ್ಯಾರಿಕೇಡ್ಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿಕ್ಕಿಹೊಡೆದಿದ್ದು ತಕ್ಷಣ ಪೊಲೀಸರು ಆ್ಯಂಬುಲೆನ್ಸ್ ಕರೆಸಿ ಗಾಯಾಳವನ್ನು ಆಸ್ಪತ್ರೆಗೆ ರವಾನಿಸಿದ್ದು, ಅಪಘಾತಕ್ಕೀಡಾಗಿದ್ದ ಕಾರನ್ನು ತೆರವುಗೊಳಿಸಿದ್ದಾರೆ.
ಅಮಿತ್ ಶಾ ರವರ ಇಂದಿನ ಕಾರ್ಯಕ್ರಮ ಈ ರೀತಿ ಇದೆ.ಸನ್ ಬ್ಲೂ ಹೋಟೆಲ್ನಿಂದ ಅಮಿತ್ ಶಾ ಅವರು ಬೆಳಗ್ಗೆ 11ಕ್ಕೆ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದಾರೆ. ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಲಿರುವ ಅಮಿತ್ ಶಾ, ಬಳಿಕ ಮಂಡಕಹಳ್ಳಿ ಏರ್ಪೋರ್ಟ್ಗೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮಕ್ಕೆ ತೆರಳಲಿದ್ದಾರೆ. ಅಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಲೋಕಸಭೆ ಚುನಾವಣೆ ಹೊತ್ತಿನಲ್ಲಿಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಿಂದಲೇ ಚುನಾವಣಾ ಪ್ರಚಾರ ಪ್ರಾರಂಭವಾಗುತ್ತ !
ಅಮಿತ್ ಶಾ ಅವರು ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಿಂದಲೇ ಚುನಾವಣಾ ರಣಕಹಳೆ ಮೊಳಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಳಗ್ಗೆಯೇ ಬಿಜೆಪಿ ಮುಖಂಡರ ಜೊತೆ ಸಭೆ ನಡೆಸಿ ಮಧ್ಯಾಹ್ನ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಮಂಡಕಹಳ್ಳಿ ಏರ್ಪೋರ್ಟ್ಗೆ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮಕ್ಕೆ ತೆರಳಲಿದ್ದಾರೆ. ಅಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಅಮಿತ್ ಶಾ ನಡೆಸುವ ಇಂದಿನ ಸಭೆ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಮಹತ್ವ ಪಡೆದುಕೊಂಡಿದೆ. ಪೂರ್ವನಿಯೋಜಿತ ಕಾರ್ಯಕ್ರಮ ಹಿನ್ನೆಲೆ ಬಿಎಸ್ ಯಡಿಯೂರಪ್ಪ ಅವರನ್ನು ಹೊರತುಪಡಿಸಿ ಈ ಸಭೆಯಲ್ಲಿ ರಾಜ್ಯದ ಪ್ರಮುಖರು ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ವಿಚಾರವಾಗಿಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಸಿದ್ದರಾಮಯ್ಯನವರು ಅಮಿತ್ ಶಾ ಅವರ ಭೇಟಿಯನ್ನು ಟೀಕಿಸಿದ್ದಾರೆ. ಲೋಕಸಭೆ ಚುನಾವಣೆಗೆ ಹೆಣೆಯಬೇಕಾಗಿರುವ ಮಹತ್ವದ ಕಾರ್ಯತಂತ್ರ ಕುರಿತು ಅಮಿತ್ ಶಾ ಚರ್ಚಿಸಲಿದ್ದಾರೆ.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್, ಚಾಮರಾಜನಗರ ಜಿಲ್ಲೆಯ 19 ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲಾ ಬಿಜೆಪಿ ಅಧ್ಯಕ್ಷರು, ನಿಕಟಪೂರ್ವ ಜಿಲ್ಲಾಧ್ಯಕ್ಷರು, ಹಾಲಿ ಹಾಗೂ ಮಾಜಿ ಶಾಸಕರು, ಸಂಸದರು, ಪ್ರಮುಖರ ಸಭೆ ಕರೆದಿದ್ದಾರೆ.ಚಾಮರಾಜನಗರ ಕ್ಷೇತ್ರದಲ್ಲಿ ಸ್ಥಳೀಯರಿಗೆ ಟಿಕೆಟ್ ಕೊಡಬೇಕು ಎಂಬ ಚರ್ಚೆಗಳು ನಡೆಯಲಿದ್ದು ಒಟ್ಟಿನಲ್ಲಿ ಇಂದಿನ ಸಭೆ ಮಹತ್ವ ಪಡೆಯಲಿದೆ.


