Monday, February 2, 2026
Flats for sale
Homeರಾಜ್ಯಮೈಸೂರು ; ಮೈಸೂರಿನಲ್ಲಿ ಯುವ ಬ್ರೀಗೆಡ್ ಕಾರ್ಯಕರ್ತನ ಬರ್ಬರ ಹತ್ಯೆ.

ಮೈಸೂರು ; ಮೈಸೂರಿನಲ್ಲಿ ಯುವ ಬ್ರೀಗೆಡ್ ಕಾರ್ಯಕರ್ತನ ಬರ್ಬರ ಹತ್ಯೆ.

ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ.

ಟಿ. ನರಸೀಪುರ ಪಟ್ಟಣದಲ್ಲಿ ಹನುಮಜಯಂತಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಬಳಿಕ ಪಟ್ಟಣದ ಹೊರವಲಯದಲ್ಲಿ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಹತ್ಯೆ ಮಾಡಲಾಗಿದೆ.

ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿದ್ದ ವೇಣುಗೋಪಾಲನನ್ನು ಪಟ್ಟಣದ ಹೊರವಲಯದಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಲಾಗಿದ್ದು, ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular