Friday, July 31, 2026
Homeರಾಜ್ಯಮೈಸೂರು : ಮೈಸೂರಿನಲ್ಲಿ ಅಗ್ನಿ ದುರಂತ : ಲಿಕ್ಕರ್ ಗ್ಯಾರೇಜ್‌ನಲ್ಲಿ ಬೆಂಕಿ, ಹಲವರಿಗೆ ಗಾಯ.

ಮೈಸೂರು : ಮೈಸೂರಿನಲ್ಲಿ ಅಗ್ನಿ ದುರಂತ : ಲಿಕ್ಕರ್ ಗ್ಯಾರೇಜ್‌ನಲ್ಲಿ ಬೆಂಕಿ, ಹಲವರಿಗೆ ಗಾಯ.

ಮೈಸೂರು : ನಗರದ ಆರ್.ಟಿ.ನಗರದ ದಟ್ಟಗಳ್ಳಿ ಸಮೀಪದ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್‌ನಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿ ಬೆಂಕಿ ಅವಘಡ ಉಂಟಾಗಿದೆ.

ಅವಘಡದ ವೇಳೆ ಪಬ್‌ನಲ್ಲಿದ್ದ ಹಲವರಿಗೆ ಸುಟ್ಟಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಫೋಟದ ತೀವ್ರತೆಗೆ ಕಟ್ಟಡದೊಳಗೆ ದಟ್ಟ ಹೊಗೆ ಆವರಿಸಿದ್ದರಿಂದ ಆತಂಕಗೊಂಡ ಕೆಲವರು ಮೇಲಂತಸ್ತಿನಿಂದ ಜಿಗಿದು ಪಾರಾಗಲು ಯತ್ನಿಸಿದ ಘಟನೆ ನಡೆದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular