ಮೈಸೂರು : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳ ಪವಿತ್ರ ಸ್ನಾನ ನಡೆಯುತ್ತಿದೆ ಮತ್ತೊಂದೆಡೆ ಕರ್ನಾಟಕದ ಪವಿತ್ರ ಕ್ಷೇತ್ರವಾದ ಟಿ.ನರಸೀಪುರದ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿAದ 3 ದಿನಗಳ 13 ನೇ ಕುಂಭಮೇಳ ಜರುಗಲಿದೆ ದಕ್ಷಿಣ ಭಾರತದ ಏಕೈಕ ಕುಂಭಮೇಳ ನಡೆಯುವ ಐತಿಹಾಸಿಕ ಸ್ಥಳ ಇದಾಗಿದೆ.


ಫೆ.12 ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ. ಅಂದು ಬೆಳಗ್ಗೆ 9 ರಿಂದ 9.30 ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12 ರಿಂದ 1 ಗಂಟೆವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ. ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಲಕ್ಷಾAತರ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತರು ಸೇರಲಿದ್ದಾರೆ.
ಕುಂಭಮೇಳದ ಧಾರ್ಮಿಕ ಕಾರ್ಯಕ್ರಮಕ್ಕಾಗಿ ವೇದಿಕೆ ನಿರ್ಮಾಣ, ಸ್ವಚ್ಛತಾ, ಲೈಟಿಂಗ್ಸ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ .ನದಿಯ ಒಳಗೆ ಬೊಂಬುಗಳಿAದ ತಡೆ ಬೇಲಿ ನಿರ್ಮಾಣ ಮಾಡಲಾಗಿದೆ. ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ನದಿ ಪಾತ್ರದ ಹಲವೆಡೆ ಮುಳುಗುತಜ್ಞರನ್ನು ನಿಯೋಜನೆ ಮಾಡಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನೂರಾರು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಇಂದು ತ್ರಯೋದಶಿ, ಪುಷ್ಯ ಪ್ರಾತಃಕಾಲ ೯ ಗಂಟೆಗೆ ಶ್ರೀ ಅಗಸ್ತೇಶ್ವರ ಸನ್ನಿಧಿಯಲ್ಲಿ, ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಿದೆ. ಸಂಜೆ 5 ಗಂಟೆಗೆ ಧರ್ಮಸಭೆ, ಸಾಂಸ್ಕöÈತಿಕ ಕಾರ್ಯಕ್ರಮಗಳು ಮತ್ತು ಅಥಿತಿ ಗಣ್ಯರಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ. ನಾಳೆ ಫೆ.11 ರಂದು, ಚತುರ್ದಶಿ, ಆಶ್ಲೇಷ, ಪ್ರಾತಃ ಪುಣ್ಯಾಹ – ನವಗ್ರಹ ಹೋಮ, ಸುದರ್ಶನ ಹೋಮ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಧರ್ಮಸಭೆ, ಸಂಜೆ ೪ಕ್ಕೆ ಮಹಾತ್ಮರ, ಸಂತರ, ಮಹಾ ಮಂಡಲೇಶ್ವರರ ತ್ರಿವೇಣಿ ಸಂಗಮ ಕ್ಷೇತ್ರ ಪ್ರವೇಶ. ಗುಂಜಾ ನರಸಿಂಹ ಸ್ವಾಮಿ ದೇವಸ್ಥಾನದಿಂದ ಟಿ.ನರಸೀಪುರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ. ಸಂಜೆ 6 ಗಂಟೆಗೆ ಶ್ರೀ ರುದ್ರ ಹೋಮ, ಪೂರ್ಣಾಹುತಿ, ರಾತ್ರಿ 7 ಗಂಟೆಗೆ ನಡೆಯುವ ಗಂಗಾ ಪೂಜೆಯ ವೇಳೆ ವಾರಾಣಸಿ ಗಂಗಾರತಿ ಮಾದರಿಯಲ್ಲಿ ದೀಪಾರತಿ ಕಾರ್ಯಕ್ರಮ ನಡೆಯಲಿದೆ.
ಕುಂಭಮೇಳದ ಕೊನೆಯ ದಿನ ಫೆ.12 ರಂದು ಮಾಘ ಪೂರ್ಣಿಮೆಯಂದು ಬೆಳಗ್ಗೆ ಮಘ ನಕ್ಷತ್ರದಲ್ಲಿ ಚಂಡಿಹೋಮ, ಪೂರ್ಣಾಹುತಿ, ಕುಂಭೋಧ್ವಾಸನ ಹಾಗೂ ಸಪ್ತ ಪವಿತ್ರ ನದಿಗಳಿಂದ ತಂದ ತೀರ್ಥಗಳನ್ನು ತ್ರಿವೇಣಿ ಸಂಗಮದಲ್ಲಿ ಸಂಯೋಜನೆ, ಪುಣ್ಯಸ್ನಾನ, ಧರ್ಮಸಭೆ ಮೊದಲಾದ ಕಾರ್ಯಕ್ರಮಗಳು ಜರುಗಲಿವೆ ಎಂದು ಕಾರ್ಯಕ್ರಮದ ಆಯೋಜಕರು ಮಾಹಿತಿ ನೀಡಿದ್ದಾರೆ.