ಮೈಸೂರು : ಡೆತ್ ನೋಟ್ ಬರೆದು ಯುವತಿ ಸೂಸೈಡ್ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ತೂಗುಸೇತುವೆ ಮೇಲಿಂದ ಲಕ್ಷ್ಮಣ ತೀರ್ಥ ನದಿಗೆ ಹಾರಿ ಲಕ್ಷ್ಮಣ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಯುವತಿಯನ್ನು ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ರವರ ಪುತ್ರಿ ದೀಪಿಕಾ ಎಂದು ತಿಳಿದಿದೆ.
ಯುವತಿ ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ವಿಶ್ವಕವಿ ಕುವೆಂಪು ಕಾಲೇಜಿನ ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯಾಗಿದ್ದಾಳೆ.
ನನ್ನ ಆತ್ಮಹತ್ಯೆಗೆ ನಾನೇ ಕಾರಣ ಅಂತ ಡೆತ್ ನೋಟ್ ಬರೆದಿದ್ದು ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.