ಯಾದಗಿರಿ ; 8 ಬಾರಿ ಗುರಮಠಕಲ್ ಮತಕ್ಷೇತ್ರದ ಶಾಸಕರಾಗಿದ್ದ ಮಲ್ಲಿಕಾರ್ಜುನ ಖರ್ಗೆಯವರ ಗುರುಮಠಕಲ್ ನಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದೆ.
ನಾಳೆ ಅ.31 ರಂದು ಗುರುಮಠಕಲ್ ಪಟ್ಟಣದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದು ಆರ್ ಎಸ್ ಎಸ್ ಪಥಸಂಚಲನಕ್ಕೆ ಯಾದಗಿರಿ ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ
ಯಾದಗಿರಿ ಡಿಸಿ ಹರ್ಷಲ್ ಬೋಯರ್ ರಿಂದ ಆರ್ ಎಸ್ ಎಸ್ ಪಥ ಸಂಚಲನಕ್ಕೆ ಅನುಮತಿ ನೀಡಲಾಗಿದ್ದು ಗುರುಮಠಕಲ್ ಪಟ್ಟಣದ ನರೇಂದ್ರ ರಾಠೋಡ್ ಲೇಔಟ್ ನಿಂದ ಪಥಸಂಚಲನ ಆರಂಭವಾಗಲಿದೆ
ಸಾಮ್ರಾಟ್ ವೃತ್ತ, ಬಸವೇಶ್ವರ ವೃತ್ತ , ಹನುಮಾನ್ ದೇವಸ್ಥಾನ, ಕುಂಬಾರವಾಡಿ ಸೇರಿ ಹಲವೆಡೆ ಪಥಸಂಚಲನ ಸಂಚರಿಸಲಿದ್ದು ಆರ್ ಎಸ್ ಎಸ್ ಪಥಸಂಚಲನಕ್ಕೆ ಹತ್ತು ಷರತ್ತು ವಿಧಿಸಿ ಜಿಲ್ಲಾಡಳಿತ ಅನುಮತಿ ನೀಡಿಲಾಗಿದೆ.
ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು
ನಿಗದಿತ ಮಾರ್ಗವಷ್ಟೇ ಪಥಸಂಚಲನಕ್ಕೆ ಬಳಸುವುದು ಜಾತಿ, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಘೋಷಣೆ ಕೂಗದಿರುವುದು ಮಾರಕಾಸ್ತ್ರ ಹಿಡಿದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.


