Thursday, July 23, 2026
Homeರಾಜಕೀಯಯಾದಗಿರಿ : ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ಪ್ರಚೋಧನಕಾರಿ ಭಾಷಣ ; ಮಾಜಿ ಸಂಸದ ಪ್ರತಾಪ್...

ಯಾದಗಿರಿ : ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ಪ್ರಚೋಧನಕಾರಿ ಭಾಷಣ ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ F.I.Rದಾಖಲು.!

ಯಾದಗಿರಿ : ಯಾದಗಿರಿ ಜಿಲ್ಲೆಯ ಶಹಾಪುರ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ಪ್ರಚೋಧನಕಾರಿ ಭಾಷಣ ಮಾಡಿದ ಹಿನ್ನೆಲೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಶಹಾಪುರ ಪೋಲಿಸ್ ಠಾಣೆಯಲ್ಲಿ ಫ್.ಈ.ರ್ ದಾಖಲಾಗಿದೆ.

ಇದೇ 21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಭಾಗಿಯಾಗಿ ಭಾಷಣ ಮಾಡಿದ್ದು ಮುಸ್ಲಿಮರ ಕುರಿತು ಪ್ರಚೋಧನಕಾರಿ ಮಾತನಾಡಿದ್ದಾರೆಂದು ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಿಸ್ತಾ ಎಂದು ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ..? ಹಿಂದುಗಳು ಕೈಯಲ್ಲಿ ಒಂದೊಂದು ಕಲ್ಲು ಹಿಡಿದುಕೊಂಡ್ರೆ ನೀಮ್ಮ ಕಥೆ ಏನು ಆಗುತ್ತದೆ..? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದುಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ..? ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣ ಮಾತ್ರದಲ್ಲಿ ಹಿಂದುಗಳಿಗೆ ಮಾಡಲು ಬರುತ್ತದೆ ಎಂದು ಪ್ರತಾಪ್ ಸಿಂಹ ಹೇಳಿದ್ದರು.

ಧಾರ್ಮಿಕ ನಂಬಿಕೆಗಳಿಗೆ ಅವಮಾನಗೊಳಿಸಿ ಧ್ವೇಷ ಭಾವನೆಯಿಂದ ಮಾತನಾಡಿದ್ದಾರೆ ಗಲಭೆ ಮಾಡುವಂತಹ ಪ್ರಚೋಧನಕಾರಿ ಹೇಳಿಕೆ ನೀಡಿದಕ್ಕೆ ಶಹಾಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಶಹಾಪುರ ಪಿಎಸ್ಐ ಡಿ.ವಿ.ನಾಯಕ ಅವರಿಂದ ಸ್ವಯಂಕೃತ ದೂರು ದಾಖಲಾಗಿದ್ದು ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ 5 ಜನರ ವಿರುದ್ಧ ಬಿಎನ್ಎಸ್ ಕಾಯ್ದೆಯಡಿ 299, 192 ಕಾಯ್ದೆಯಡಿ ಕೇಸ್ ದಾಖಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular