ಯಾದಗಿರಿ : ಸಾವು ಯಾವ ರೀತಿ ಬರುತ್ತೆ ಎಂಬುದು ಯಾಗಿಗೂ ತಿಳಿಯುವುದಿಲ್ಲ ಎಂದಿನಂತೆಯೇ ಕರ್ತವ್ಯ ಮುಗಿಸಿ ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸ್ತಿದ್ದ ನಿನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬಿಳ್ಕೊಡುಗೆ ಪಡೆದಿದ್ದ ಪರಶುರಾಮ್ ಇನ್ನೊಂದು ಠಾಣೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ಸಾವನಪ್ಪಿದ ಫಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಪರಶುರಾಮ್ (35) ಮೃತ ದುರ್ದೈವಿ.ಕಳೆದ ಒಂದೂವರೆ ವರ್ಷದಿಂದ ನಿಷ್ಠಾವಂತ ಅಧಿಕಾರಿಯಾಗಿ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ನಿನ್ನೆಯಷ್ಟೆ ಯಾದಗಿರಿಯ ಸೈಬರ್ ಕ್ರೈಮ್ ಠಾಣೆಗೆ ವರ್ಗಾವಣೆ ಆಗಿದ್ದರು.ನಿಷ್ಠಾವಂತ ಅಧಿಕಾರಿ ಅತಟ್ಟನೆ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಅವರ ಸಹೋದ್ಯೋಗಿಗಳಿಗೆ ದಿಗಿಲುಬಡಿದಂತಾಗಿದೆ.
ಈ ಸಾವು ಅನುಮಾನ ಮೂಡಿಸಿದ್ದು, ಕುಟುಂಬಸ್ಥರನ್ನು ಶಾಕ್‌ಗೆ ನೀಡಿದೆ. ಪರಶುರಾಮ್ ಅವರ ಪತ್ನಿ ಗರ್ಭಿಣಿಯಾಗಿದ್ದು ತವರಿಗೆ ತೆರಳಿದ್ದವರು ಮರಳಿದ್ದಾರೆ. ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸ್ಥಳೀಯ ದಲಿತ ಸಂಘಟನೆಗಳು ಶಾಸಕರ ವಿರುದ್ಧ ಪ್ರತಿಭಟನೆಗೆ ಮುಂದಾಗಿವೆ.
ಈ ಕುರಿತು ಪರಶುರಾಮ್ ಅವರ ಪತ್ನಿ ಶ್ವೇತಾ ದೂರು ನೀಡಿದ್ದಾರೆ. ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿದ್ದರು ಎಂದು ಶ್ವೇತಾ ಆರೋಪಿಸಿದ್ದಾರೆ.


