Friday, March 13, 2026
Flats for sale
Homeಕ್ರೀಡೆರಾಂಚಿ : 3-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ,ಇಂಗ್ಲೆಂಡ್ ಗೆ ಹ್ಯಾಟ್ರಿಕ್ ಸೋಲು.

ರಾಂಚಿ : 3-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ,ಇಂಗ್ಲೆಂಡ್ ಗೆ ಹ್ಯಾಟ್ರಿಕ್ ಸೋಲು.

ರಾಂಚಿ : ಭಾರತ ತಂಡ 3-1 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಮೂಲಕ ಸರಣಿಯನ್ನು ವಶಪಡಿಸಿಕೊಂಡಿದೆ. ರಾಂಚಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಿತು.

ಮೊದಲನೇ ಇನ್ನಿಂಗ್ಸ್ ನಲ್ಲಿ 46 ರ್ ಗಳ ಮುನ್ನಡೆ ಪಡೆದಿದ್ದ ಇಂಗ್ಲೆಂಡ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಸ್ಪೀನರ್ ಗಳಾದ ಆರ್ ಅಶ್ವಿನ್ ಮತ್ತು ಕುಲದೀಪ್ ಯಾದವ್ ಯಶಸ್ವಿಯಾದರು. ಪರಿಣಾಮ ಮೂರನೇ ದಿನವಾದ ಭಾನುವಾರ ಇಂಗ್ಲೆಂಡ್ ಭಾರತಕ್ಕೆ 196 ರನ್ ಗಳ ಟಾರ್ಗೆಟ್ ನೀಡಿತ್ತು. ದಿನದಾಟದ ಅಂತ್ಯಕ್ಯೆ ಭಾರತ ತಂಡ 8 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿತ್ತು.

ಐದು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 28 ರನ್​ಗಳ ಜಯ ಸಾಧಿಸಿತ್ತು. ಇನ್ನು 2ನೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ 106 ರನ್​ಗಳ ಭರ್ಜರಿ ಜಯ ದಾಖಲಿಸಿತು. ಹಾಗೆಯೇ 3ನೇ ಟೆಸ್ಟ್ ಪಂದ್ಯದಲ್ಲಿ 434 ರನ್​ಗಳಿಂದ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದು ಭಾರತ ತಂಡ ಹೊಸ ಇತಿಹಾಸ ನಿರ್ಮಿಸಿತ್ತು. ಇದೀಗ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತು. ಈ ಮೂಲಕ ಇಂಗ್ಲೆಂಡ್ ತಂಡಕ್ಕೆ ಹ್ಯಾಟ್ರಿಕ್ ಸೋಲುಣಿಸಿದೆ.

ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ನೀಡಿದ್ದ 192 ರನ್ ಗುರಿ ಬೆನ್ನತ್ತಿದ್ದ ಭಾರತದ ಪರ ನಾಯಕ ರೋಹಿತ್ ಶರ್ಮಾ 55, ಶುಭಮನ್ ಗಿಲ್ ಅಜೇಯ 52 ರನ್ ಗಳ ನೆರವಿನಿಂದ ಐದು ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ಉಳಿದಂತೆ ಯಶಸ್ವಿ ಜೈಸ್ವಾಲ್ 37, ಧ್ರುವ್ ಜುರೇಲ್ 39 ರನ್ ಗಳಿಸಿದರು. ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿನ್ನು ಭಾರತ 3-1 ಅಂತರದಿಂದ ಕೈ ವಶ ಮಾಡಿಕೊಂಡಿತು.

RELATED ARTICLES

LEAVE A REPLY

Please enter your comment!
Please enter your name here

Most Popular