ರಾಮನಗರ : ಲೋಕಸಭೆಗೆ ಮಾಜಿ ಮುಖ್ಯಮಂತ್ರಿ ಎಚ್ .ಡಿ ಕುಮಾರಸ್ವಾಮಿ ಯವರು ಆಯ್ಕೆ ಆದ ಹಿನ್ನೆಲೆ 185 – ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದಾಳ ಉರುಳಿಸಿದ್ದು . ಸಿಪಿ ಯೋಗೇಶ್ವರ್‌ರನ್ನ ಪಕ್ಷಕ್ಕೆ ಕರೆತರುವಲ್ಲಿ ಅವರ ಆಪರೇಷನ್ ಯಶಸ್ವಿಯಾಗಿದೆ. ಇದೀಗ ದಳಪತಿಗಳ ಕೋಟೆಯಲ್ಲಿ ಪವರ್ ಶೋ ನಡೆಸಿ, ಜೆಡಿಎಸ್ ನಾಯಕರಿಗೆ ಟಕ್ಕರ್ ಕೊಟ್ಟಿದ್ದಾರೆ. ಅಕ್ಟೋಬರ್ 24ರ ಗುರುವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಅವರು ಚನ್ನಪಟ್ಟಣದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ .
ದಳಪತಿಗಳ ಸಾಮ್ರಾಜ್ಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಅಸಲಿ ಯುದ್ಧಕ್ಕೆ ರಣಕಹಳೆ ಊದಿದ್ದಾರೆ.ಚನ್ನಪಟ್ಟಣದಲ್ಲೇ ತಂಗಿದ್ದ ಸಿಪಿವೈ ಮಂಗಳವಾರಪೇಟೆಯಲ್ಲಿರುವ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ಒಂದೂವರೆ ಕಿಲೋ ಮೀಟರ್ ಱಲಿ ನಡೆಸಿದರು. ರ್ಯಾಲಿಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡರು. ರ್ಯಾಲಿಯುದ್ದಕ್ಕೂ ಘೋಷಣೆ ಮೊಳಗಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ರ್ಯಾಲಿಯಲ್ಲಿ ಉಪಸ್ಥಿತರಿದ್ದರು..