ರಾಮನಗರ : ಮಾರುತಿ 800 ಕಾರು ಹಾಗೂ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ಒಂದೇ ಕುಟುಂಬದ ಮೂವರ ಸಾವನಪ್ಪಿದ ಘಟನೆ ನಡೆದಿದೆ.

ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದೆ. ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಸಮೀಪ ಘಟನೆ ನಡೆದಿದ್ದು ಎಕ್ಸ್‌ಪ್ರೆಸ್ ಹೈವೆ ಸರ್ವೀಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ಮೃತರು ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು
ಶಿವಪ್ರಕಾಶ್ (37), ಪುಟ್ಟಗೌರಮ್ಮ (72), ಶಿವರತ್ನ (50) ಎಂದು ತಿಳಿದಿದೆ.
ಕ್ಯಾಂಟರ್ ಚಾಲಕ ನಾಗೇಶ್ ಗೂ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಬೆಂಗಳೂರಿನ ನಿಮ್ಹಾನ್ಸ್ ಗೆ ದಾಖಲಿಸಲಾಗಿದೆ.
ಸರ್ವೀಸ್ ರಸ್ತೆಯಲ್ಲಿ ಮಂಡ್ಯದ ಕಡೆಗೆ ಕಾರು ಹೋಗ್ತಿದ್ದು ಈ ವೇಳೆ ಎದುರು ಬಂದ ಕ್ಯಾಂಟರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮಾರುತಿ ಕಾರು ಸಂಪೂರ್ಣ ಜಖಂ ಆಗಿದ್ದು ಕ್ಯಾಂಟರ್ ಚಾಲಕನಿಗೂ ಗಾಯಗಳಾಗಿವೆ.
ಮೃತದೇಹಗಳು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರ ಭೇಟಿನೀಡಿದ್ದು ಪರಿಶೀಲನೆ ನಡೆಸಿದ್ದಾರೆ.