Thursday, March 12, 2026
Flats for sale
Homeರಾಜ್ಯರಾಮನಗರ : 25 ವರ್ಷದ ವಕೀಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ.

ರಾಮನಗರ : 25 ವರ್ಷದ ವಕೀಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ.

ರಾಮನಗರ : ಇತ್ತಿಚ್ಚಿನ ದಿನಗಳನಂತೂ ಯುವ ಪೀಳಿಗೆಗಳು ಮಾನಸಿಕ ಸ್ಥೈರ್ಯ ಕಳೆದುಕೊಂಡಿದ್ದು ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ . ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಕೀಲೆಯೊಬ್ಬರು ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ.

ಮೃತ ವಕೀಲೆಯನ್ನು 25 ವರ್ಷದ ವಾಸುಕಿ ಎಂದು ಗುರುತಿಸಲಾಗಿದ್ದು, ಇಂದು ಸಂಜೆ ಮಾಗಡಿಯ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯುವತಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular