Thursday, November 6, 2025
Flats for sale
Homeರಾಜಕೀಯರಾಯಚೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಪ್ರತಾಪ್ ಸಿಂಹ ವಿರುದ್ಧ ಸ್ಪರ್ಧಿಸುವುದರಿಂದ ಸಿಂಹನಿಗೆ...

ರಾಯಚೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಪ್ರತಾಪ್ ಸಿಂಹ ವಿರುದ್ಧ ಸ್ಪರ್ಧಿಸುವುದರಿಂದ ಸಿಂಹನಿಗೆ ಭಯ ಶುರುವಾಗಿದೆ : ಸಿದ್ದರಾಮಯ್ಯ.

ರಾಯಚೂರು : ಇನ್ನೇನು ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಉಳಿದಿದ್ದು ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ತಮ್ಮ ವಿರುದ್ಧ ಸ್ಪರ್ಧಿಸುತ್ತಾರೆ ಎಂದು ಸಂಸದ ಪ್ರತಾಪ್​ ಸಿಂಹ ಅವರಿಗೆ ಭಯ ಶುರುವಾಗಿದೆ ಎಂದು ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಯಚೂರಿನಲ್ಲಿ ಹೇಳಿದ್ದಾರೆ.

ಆ ಕ್ಷೇತ್ರಗಳ ಶಾಸಕರು, ಸ್ಥಳೀಯ ಮುಖಂಡರು ಮತ್ತು ಪಕ್ಷದ ಪದಾಧಿಕಾರಿಗಳ ಶಿಫಾರಸುಗಳನ್ನು ಆಧರಿಸಿ ಸ್ಥ ಆಧರಿಸಿ ಟಿಕೆಟ್ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ರಾಯಚೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ತಿಳಿಸಿದ್ದಾರೆ ಯಾವುದೇ ವೈಯಕ್ತಿಕ ಆಯ್ಕೆಯನ್ನು ಆಧರಿಸಿ ಟಿಕೆಟ್ ನೀಡುವುದು ಅಲ್ಲ ಎಂದು ಹೇಳಿದ್ದಾರೆ ಲೋಕಸಭಾ ಕ್ಷೇತ್ರದ ವೀಕ್ಷಕರಾಗಿ ರಾಜ್ಯ ನಗರಾಭಿವೃದ್ಧಿ ಸಚಿವ ಸುರೇಶ ಬಿಎಸ್ ಅವರನ್ನು ನೇಮಿಸಲಾಗಿದ್ದು ಸುರೇಶ ಅವರು ಸಂಭಾವ್ಯ ಅಭ್ಯರ್ಥಿಗಳ ವರದಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಯತೀಂದ್ರ ಸ್ಪರ್ಧೆ ಮಾಡಿದರೆ ಸಿಎಂ ಪುತ್ರ-ಪತ್ರಕರ್ತನ ನಡುವೆ ಫೈಟ್ ನಡೆಯುತ್ತದೆ. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಅವರು ಎದುರಾಳಿಯಾದರೆ ಒಳ್ಳೆಯದು ಎಂದು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಈ ಹಿಂದೆ ಹೇಳಿದ್ದರು ಇದಕ್ಕೆ ಪ್ರತ್ಯುತ್ತರ ನೀಡಿದ ಸಿ ಎಂ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುವುದರಿಂದ ಟಫ್ ಫೈಟ್ ಇದೆ ಎಂದು ಸಂಸದ ಪ್ರತಾಪ್ ಸಿಂಹ ಅವರಿಗೆ ಭಯ ಶುರುವಾಗಿದ್ದು ಈ ಹಿನ್ನೆಲೆ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು
ಸಿದ್ದರಾಮಯ್ಯ ಮಾಧ್ಯಮಿತ್ರರಿಗೆ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular