ರಿಪ್ಪನ್‌ಪೇಟೆ : ಪಟ್ಟಣದ ಗವಟೂರು ಗ್ರಾಮದ ಖಾಸಗಿ ಕಟ್ಟಡದ ಹಿಂಭಾಗದಲ್ಲಿ ಹಣವನ್ನು ಪಣಕಿಟ್ಟು ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಕಾನೂನು ಬಾಹಿರವಾಗಿ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ 14,700 ರೂ ನಗದು ವಶಪಡಿಸಿಕೊಳ್ಳಲಾಗಿದೆ.
ಗವಟೂರು ಗ್ರಾಮದ ಖಾಸಗಿ ವಸತಿ ಗೃಹವೊಂದರ ಹಿಂಭಾಗದಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ವರ್ತಮಾನ ಪಡೆದ ರಿಪ್ಪನ್‌ಪೇಟೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿ ಜೂಜಾಟ ಕ್ಕೆ ತೊಡಗಿಸಿಕೊಂಡಿದ್ದ 14,700 ರೂಗಳನ್ನು 52 ಇಸ್ಪೀಟ್ ಎಲೆ, ಚಾರ್ಜರ್ ಲೈಟ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಳಾದ ಉಜ್ಜಪ್ಪಗೌಡ,ವಿಜಯ್ ಕುಮಾರ್ ,ಚಂದ್ರಚಾರ್ಯ , ರಮೇಶ್ ,ಮಂಜುನಾಥ ,ನವೀನ್ ಹಾಗೂ ಸೋಮಶೇಖರ್ ವಿರುದ್ದ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯಲಾಗಿದೆ.
ಜಿಲ್ಲಾ ಎಸ್ ಪಿ ಮಿಥುನ್ ಕುಮಾರ್ ಜಿ ಕೆ, ಎ ಎಸ್ ಪಿ ಅನಿಲ್ ಕುಮಾರ್, ಎನ್ ಬೂಮರೆಡ್ಡಿ ತೀರ್ಥಹಳ್ಳಿ ಉಪ ವಿಭಾಗದ ಡಿ ವೈ ಎಸ್ ಪಿ ಗಜಾನನ ಎಂ ಸುತಾರ, ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಮಾರ್ಗದರ್ಶನದಲ್ಲಿ ಪ್ರವೀಣ್ ಎಸ್ ಪಿ ರವರು ಸಿಬ್ಬಂದಿಗಳಾದ ಉಮೇಶ್ , ಶಿವಕುಮಾರ್ ,ಮಧುಸೂಧನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


