ರಿಪ್ಪನ್‌ಪೇಟೆ : ಸಮೀಪದ ಕೆಂಚನಾಲ ಗ್ರಾಮದಲ್ಲಿ ಜಾನುವಾರುಗಳನ್ನು ಓಮಿನಿ ಕಾರಿನಲ್ಲಿ ಅಕ್ರಮ ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾದ ಘಟನೆ ನಡೆದಿದೆ.
ಓಮಿನಿ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಅನುಮಾನದಿಂದ ಗ್ರಾಮಸ್ಥರು ವಾಹನವನ್ನು ತಡೆದು ತಪಾಸಣೆಗೆ ಮುಂದಾಗುತ್ತಿದ್ದಂತೆ ಕಾರಿನ ಚಾಲಕ ಮಹಮ್ಮದ್ ತಪ್ಪಿಸಿಕೊಂಡು ಪರಾರಿಯಾಗಿದ್ದು ಇನ್ನೋರ್ವ ಆರೋಪಿ ಅಸ್ಲಾಂ ಬೇಗ್ ಸಿಕ್ಕಿಬಿದ್ದಿದ್ದಾನೆ ಈ ಸಂಧರ್ಭದಲ್ಲಿ ಓಮಿನಿ ಕಾರಿನಲ್ಲಿ ಕೈಕಾಲು ಕಟ್ಟಿ ಎರಡು ಜಾನುವಾರುಗಳನ್ನು ಅಮಾನುಷವಾಗಿ ಇರಿಸಿದ್ದರಿಂದ ಆಕ್ರೋಶಿತರಾದ ಗ್ರಾಮಸ್ಥರು ಆರೋಪಿಗೆ ಧರ್ಮದೇಟು ನೀಡಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂದ ಹಲ್ಲೆಗೊಳಗಾದ ವ್ಯಕ್ತಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ.
ಈ ಘಟನೆ ಸಂಬಂದ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ಅಕ್ರಮ ಗೋ ಸಾಗಾಟಕ್ಕೆ ಯತ್ನಿಸಿದ ಆರೋಪಿಗಳ ವಿರುದ್ದ ಐಪಿಸಿ 379 ಸೆಕ್ಷನ್ ಅಡಿಯಲ್ಲಿ ದೂರು ದಾಖಲಾಗಿದೆ.
ಅಕ್ರಮ ಗೋ ಸಾಗಾಟವನ್ನು ತಡೆದು ಆರೋಪಿಯ ವಿರುದ್ದ ದೈಹಿಕ ಹಲ್ಲೆ ನಡೆಸಿದ 8 ರಿಂದ 10 ಮಂದಿಯ ವಿರುದ್ದ ಐಪಿಸಿಸೆಕ್ಷನ್ ಅಡಿಯಲ್ಲಿ ದೂರು ದಾಖಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


