Friday, March 13, 2026
Flats for sale
Homeರಾಜ್ಯರಿಪ್ಪನ್‌ಪೇಟೆ ; ಸರಣಿ ಅಪಘಾತ. ಅಪಾಯದಿಂದ ಪಾರಾದ ಕಾರು ಚಾಲಕ.

ರಿಪ್ಪನ್‌ಪೇಟೆ ; ಸರಣಿ ಅಪಘಾತ. ಅಪಾಯದಿಂದ ಪಾರಾದ ಕಾರು ಚಾಲಕ.

ರಿಪ್ಪನ್‌ಪೇಟೆ ; ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಕಾರ್ ಜಖಂಗೊಂಡ ಘಟನೆ ಘಟನೆ ಶನಿವಾರ ಸಂಜೆ ರಿಪ್ಪನ್‌ಪೇಟೆ – ಹೊಸನಗರ ರಾಜ್ಯ ಹೆದ್ದಾರಿ ಕೋಡೂರಿನಲ್ಲಿ ನಡೆದಿದೆ.

ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರದ ಕಡೆ ಚಲಿಸುತ್ತಿದ್ದ ಎರ್ಟಿಗಾ ಕಾರು (KA15 N 8342) ದಿಢೀರನೆ ರಸ್ತೆಗೆ ರಸ್ತೆಗೆ ಅಡ್ಡ ಬಂದ ಮಾರುತಿ ಓಮ್ನಿ ವಾಹನಕ್ಕೆ ಗುದ್ದಿದ ಪರಿಣಾಮ ಕಾರಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಹಿಟಾಚಿ ಯಂತ್ರ ತುಂಬಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಅದೃಷ್ಟವಶಾತ್ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಘಟನೆಯಲ್ಲಿ ಲಾರಿಯ ಮುಂಭಾಗಕ್ಕೂ ಸಾಕಷ್ಟು ಹಾನಿಯಾಗಿದೆ.

ಹೊಸನಗರ ತಾಲೂಕಿನ ಸೊನಲೆ ಗ್ರಾಮದ ಅಂಬರೀಶ್ ಎಂಬ ಚಾಲಕ ಮಾತ್ರ ಕಾರಿನಲ್ಲಿದ್ದ ಎಂದು ತಿಳಿದುಬಂದಿದೆ. ಈತ ತಮ್ಮ ಬೆಂಗಳೂರಿಗೆ ತೆರಳುತ್ತಿದ್ದ ಸಂಬಂಧಿಯೊಬ್ಬರನ್ನು ಅರಸಾಳು ರೈಲು ನಿಲ್ದಾಣಕ್ಕೆ ಬಿಟ್ಟು ವಾಪಾಸ್ ಆಗುತ್ತಿದ್ದ ಎಂದು ತಿಳಿದುಬಂದಿದೆ.

ರಿಪ್ಪನ್ ಪೇಟೆ ಪಿಎಸ್ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಈ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular