ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಕ್ವಾಡ್ರಿಗೆ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಒಣಗಿಸಿಟ್ಟ ಲಕ್ಷಾಂತರ ರೂಪಾಯಿಗಳ ಮೌಲ್ಯದ ಅಡಿಕೆ ಕಳ್ಳತನವಾಗಿರುವ ಘಟನೆ ನಡೆದಿದೆ.
ಕ್ವಾಡ್ರಿಗೆ ಗ್ರಾಮದ ಬಾಲರಾಜ್ ಎಂಬುವವರ ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಮೂರು ಕ್ವಿಂಟಾಲ್ ಗೂ ಹೆಚ್ಚೂ ಅಡಿಕೆಯನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಸ್ಥಳಕ್ಕೆ ಪಟ್ಟಣದ ಪೊಲೀಸರು ಭೇಟಿ ನೀಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


