ರಿಪ್ಪನ್ ಪೇಟೆ : ಕಲಿಕೆಗೆ ಎಷ್ಟು ಆದ್ಯತೆ ಕೊಡುತ್ತೇವೆಯೋ ಹಾಗೆ ಕ್ರೀಡೆ ಮತ್ತು ಇತರ ಚಟುವಟಿಗಳಿಗೆ ಆದ್ಯತೆ ಕೊಡಬೇಕು. ಆಗ ಮಾತ್ರ ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಹೇಳಿದರು
ರಿಪ್ಪನ್ ಪೇಟೆ ಸಮೀಪದ ಅಮೃತ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಹೊಸನಗರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಕಲಿಕೆಗೆ ಎಷ್ಟು ಆದ್ಯತೆ ಕೊಡುತ್ತೇವೆಯೋ ಹಾಗೆ ಕ್ರೀಡೆ ಮತ್ತು ಇತರ ಚಟುವಟಿಗಳಿಗೆ ಆದ್ಯತೆ ಕೊಟ್ಟಾಗ ಮಾತ್ರ ಉತ್ತಮ ಶಿಕ್ಷಣ ಕೊಡಲು ಸಾಧ್ಯ ಎಂದರು.
ವಿದ್ಯಾರ್ಥಿಗಳು ದೈಹಿಕವಾಗಿ ಮಾನಸಿಕವಾಗಿ ಸದೃಢವಾದಾಗ ಮಾತ್ರ ಮಕ್ಕಳ ಸರ್ವಾಂಗೀಣ ಬೆಳವಣಿಗೆ ಆಗುತ್ತದೆ. ಸರ್ಕಾರ ಪ್ರತಿಭಾ ಕಾರಂಜಿ ಕ್ರೀಡೆ ಹಾಗೂ ಇತರೆ ಚಟುವಟಿಕೆಗಳಿಗೆ ಆರ್ಥಿಕ ಭದ್ರತೆ ಒದಗಿಸಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.
ವಿದ್ಯಾರ್ಥಿಗಳು ಶಿಸ್ತು ಬದ್ದ ಜೀವನ ನಡೆಸಬೇಕು ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಅದನ್ನು ಕ್ರೀಡಾ ಮನೋಭಾವನೆಯಿಂದ ಸ್ವೀಕರಿಸಬೇಕು ದೇಹ ಹಾಗೂ ಮನಸ್ಸಿನ ಆರೋಗ್ಯ ಚೆನ್ನಾಗಿರಬೇಕು ಎಂದು ಸಲಹೆ ನೀಡಿದ ಅವರು ಹಳ್ಳಿಗಾಡಿನಲ್ಲಿ ಮಕ್ಕಳಿಗೆ ಶಿಕ್ಷಕರ ಕೊರತೆ ಇದೆ ಶಿಕ್ಷಣಕ್ಕೋಸ್ಕರ ಕಾಲೇಜು ತೆರೆದಿದ್ದರೂ ಸಹ ಸರಿಯಾದ ಉಪನ್ಯಾಸಕರುಗಳು ಸರ್ಕಾರಿ ಕಾಲೇಜುಗಳಲ್ಲಿ ದೊರೆಯುತ್ತಿಲ್ಲ ಸರ್ಕಾರ ಸರ್ಕಾರಿ ಕಾಲೇಜುಗಳನ್ನ ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಹೇಳಿದರು.
ಸಮಾರಂಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ ಕೃಷ್ಣಪ್ಪ ಮಾತನಾಡಿ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರುಗಳು ಇಲ್ಲದಿದ್ದರೂ ಸಹ ಉಪನ್ಯಾಸಕರ ಮಾರ್ಗದರ್ಶನದಿಂದ ಹಾಗೂ ವಿದ್ಯಾರ್ಥಿಗಳ ಕಠಿಣ ಅಭ್ಯಾಸ ಮತ್ತು ಶ್ರಮದಿಂದ ಕ್ರೀಡಾಕೂಟದಲ್ಲಿ ಭಾಗವಹಿಸುವುದರ ಮೂಲಕ ಕ್ರೀಡಾ ಲೋಕದಲ್ಲಿ ಯಶಸ್ವಿಗಳಿ ಸುತ್ತಿರುವುದು ಸಂತಸದ ಸಂಗತಿ ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಮಹಮ್ಮದ್ ನಜಹತ್ ಉಲ್ಲಾ ವಹಿಸಿದ್ದರು.
ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ ಚಂದ್ರಪ್ಪ ಗುಂಡುಪಲ್ಲಿ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್. ಯೋಗೀಶ್ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ. ಗ್ರಾಪಂ ಅಧ್ಯಕ್ಷ ವಿಶ್ವನಾಥ್.ಮಾಜಿ ಅಧ್ಯಕ್ಷ ನಿರ್ಮಲ ರಾಜು, ಬಶೀರ್ ಅಹ್ಮದ್,ದಿನೇಶ್ ಬಂಡಿ. ನಿವೃತ್ತ ಜಿಲ್ಲಾ ಉಪ ನಿರ್ದೇಶಕ ನಾಗರಾಜ್ ಕಾಗಲ್ಕರ್,ಉಪನ್ಯಾಸಕರಾದ ಹಾಲಪ್ಪ ಸಂಕೂರ್, ಪ್ರಕಾಶ್, ಪ್ರಾನ್ಸಿಸ್ ಬೆಂಜಾಮಿನ್, ನಾಗೇಶ್ ಸೋಮಯಾ ಜಿ, ಸತೀಶ್, ಶಿವಪುರ ರಾಜು, ಸುನಿಲ್,ರಿಪ್ಪನ್ ಪೇಟೆ ನಗರ ನಿಟ್ಟೂರು ಹೊಸನಗರ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.


