Thursday, March 12, 2026
Flats for sale
Homeರಾಜ್ಯರಿಪ್ಪನ್ ಪೇಟೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತರಗತಿಗಳಿಗೆ ಗೈರು. ಪೋಷಕರಿಂದ...

ರಿಪ್ಪನ್ ಪೇಟೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತರಗತಿಗಳಿಗೆ ಗೈರು. ಪೋಷಕರಿಂದ ಹಾಗೂ ವಿದ್ಯಾರ್ಥಿಗಳಿಂದ ಪ್ರತಿಭಟನೆ.

ರಿಪ್ಪನ್ ಪೇಟೆ : ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ತಮ್ಮಡಿ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಗಂಗಾಧರ್ ನಾಯಕ್ ನಿರಂತರವಾಗಿ ಗೈರು ಹಾಜರಾಗುತ್ತಿದ್ದು. ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ತಮ್ಮಡಿ ಕೊ ಪ್ಪದ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳೊಂದಿಗೆ ಶಾಲೆಗೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ನಿರಂತರವಾಗಿ ತರಗತಿಗಳಿಗೆ ಗೈರುಹಾಜರಾಗುತ್ತಿರುವ ಮುಖ್ಯ ಶಿಕ್ಷಕರಾದ ಗಂಗಾಧರ್ ನಾಯಕ್ರನ್ನು ಈ ಕೂಡಲೇ ವರ್ಗಾವಣೆ ಮಾಡಿ, ಬೇರೆ ಶಿಕ್ಷಕರನ್ನು ನೇಮಕ ಮಾಡುವವರಿಗೂ ತಮ್ಮ ಪ್ರತಿಭಟನೆ ಮುಂದುವರೆಯುತ್ತದೆ ಎಂದು ಪೋಷಕರು ಹಾಗೂ ಗ್ರಾಮಸ್ಥರು ಮಾಧ್ಯಮದವರಿಗೆ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular