Friday, March 13, 2026
Flats for sale
Homeದೇಶಲಕ್ನೋ : ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಭೀಕರ ಅಪಘಾತ ; ಟ್ರ್ಯಾಕ್ಟರ್-ಟ್ರಾಲಿ ಕೊಳಕ್ಕೆ ಬಿದ್ದು 20...

ಲಕ್ನೋ : ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಭೀಕರ ಅಪಘಾತ ; ಟ್ರ್ಯಾಕ್ಟರ್-ಟ್ರಾಲಿ ಕೊಳಕ್ಕೆ ಬಿದ್ದು 20 ಮಂದಿ ಸಾವು.

ಲಕ್ನೋ : ಉತ್ತರ ಪ್ರದೇಶದಲ್ಲಿ ಟ್ರಾಕ್ಟರ್ ಟ್ರಾಲಿ ಕೊಳದಲ್ಲಿ ಬಿದ್ದ ಪರಿಣಾಮ ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಕನಿಷ್ಠ 20 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಕದರ್‌ಗಂಜ್‌ಗೆ ತೆರಳುತ್ತಿದ್ದಾಗ ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಅಪಘಾತ ಸಂಭವಿಸಿದೆ.

ಪಟಿಯಾಲಿ ಕೊಟ್ವಾಲಿ ಪ್ರದೇಶದ ದರಿಯಾವ್ಗಂಜ್ ನಿಲ್ದಾಣದ ಬಳಿ ಸಂಭವಿಸಿದ ಅಪಘಾತದಲ್ಲಿ ಎಂಟು ಮಕ್ಕಳು ಮತ್ತು ಏಳು ಮಹಿಳೆಯರು ಸೇರಿದಂತೆ 20 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಲಿಗಢ ವಲಯದ ಐಜಿ ಶಲಭ್ ಮಾಥುರ್ ಮಾಹಿತಿ ನೀಡಿದ್ದಾರೆ. ರಸ್ತೆಯಲ್ಲಿ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ಟ್ರ್ಯಾಕ್ಟರ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದ ಎಂದು ಅವರು ತಿಳಿಸಿದ್ದಾರೆ.

ಗ್ರಾಮಸ್ಥರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಕೆಸರು ತುಂಬಿದ ಕೊಳಕ್ಕೆ ಪಲ್ಟಿಯಾಗಿದ್ದರಿಂದ ಹೆಚ್ಚಿನ ಸಾವು ನೋವು ಸಂಭವಿಸಿದೆ. ಗಾಯಗೊಂಡವರನ್ನು ಕಾಸ್ಗಂಜ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular