ಲೇಹ್ : ಲೇಹ್ ಅಪೇಕ್ಸ್ ಬಾಡಿ ನೇತೃತ್ವದಲ್ಲಿ ಲಡಾಖ್ ರಾಜ್ಯ ಸ್ಥಾನಮಾನ ಮತ್ತು 6ನೇ ಪರಿಚ್ಛೇದದ ಅಡಿಯಲ್ಲಿ ಸೇರಿಸುವಂತೆ ಆಗ್ರಹಿಸಿ ಬುಧವಾರ ನಡೆದ ಪ್ರತಿಭಟನೆ ಹಿಂಸಾಚಾರ ರೂಪಕ್ಕೆ ತಿರುಗಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, 3೦ಕ್ಕೂ ಹೆಚ್ಚು ಮಂದಿ ಗಾಯಗೊAಡಿದ್ದಾರೆ.
ವರದಿ ಪ್ರಕಾರ, ಪೊಲೀ ಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರತಿಭಟನೆ ಕಾರರು, ಪೊಲೀಸ್ ವಾಹವನಗಳನ್ನು ಸುಟ್ಟು ಹಾಕಿದ್ದಾರೆ. ಬಿಜೆಪಿ ಕಚೇರಿಗೂ ಬೆಂಕಿ ಹಾಕಿದ್ದಾರೆ. ಈ ಮೂಲಕ ರಾಜ್ಯಕ್ಕಾಗಿ ನಡೆಯುತ್ತಿರುವ ಹೋರಾಟ ಇದೇ ಮೊದಲ ಬಾರಿಗೆ ಹಿಂಸಾತ್ಮಕ ರೂಪ ಪಡೆದುಕೊಂಡಿದೆ
ಕಳೆದ ೧೫ ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಮ್ ವಾಂಗ್‌ಚುಕ್ ಪ್ರತಿಭಟನೆ ಹಿAಸಾತ್ಮಕ ರೂಪ ಪಡೆಯುತ್ತಿದ್ದಂತೆ
ಸತ್ಯಾಗ್ರಹ ಹಿಂಪಡೆದಿದ್ದಾರೆ. ಹಿAಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಪ್ರತಿಭಟನಕಾರರಿ ಮನವಿ ಮಾಡಿಕೊಂಡಿದ್ದಾರೆ.