ವಾರಾಣಸಿ ; ಉತ್ತರ ಪ್ರದೇಶದ ವಾರಣಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಆಯ್ಕೆ ಬಯಸಿ ಪ್ರಧಾನಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸಿದರು.
ಈ ವೇಳೆ ಎನ್ಡಿಎ ನಾಯಕರು ಪ್ರಧಾನಿ ಅವರಿಗೆ ಸಾಥ್ ನೀಡುವ ಮೂಲಕ ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು ನಾಮಪತ್ರ ಸಲ್ಲಿಕೆಗೆ ಮುನ್ನ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿ, ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಹ್ಯಾಟ್ರಿಕ್ ಬಾರಿಸುವ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 11.40ಕ್ಕೆ ವಾರಾಣಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು.
ಈ ದಿನ ಅಭಿಜಿತ್ ಮುಹೂರ್ತ, ಆನಂದ ಯೋಗ, ಸರ್ವಾರ್ಥಿಸಿದ್ದ ಯೋಗ, ಭೌಮ ಪುಷ್ಯ ನಕ್ಷತ್ರದ ಕಾಕತಾಳೀಯ ಸಂಗಮವಾಗಿದ್ದು, ಇದು ಉತ್ತಮ ದಿನವಾಗಿದೆ ಎಂದು ಅಯೋಧ್ಯ ರಾಮಮಂದಿರ ಶಂಕು ಸ್ಥಾಪನೆಗೆ ಶುಭ ಮುಹೂರ್ತ ನೀಡಿದ್ದ ಪಂಡಿತ್ ಶಾಸ್ತಿç ದ್ರಾವಿಡ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಮಪತ್ರ ಸಲ್ಲಿಕೆಗೆ ಸಮಯ ನಿಗದಿ ಪಡಿಸಿದ್ದರು.
ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ೧೨ಕ್ಕೂ ಅಧಿಕ ಬಿಜೆಪಿ ಆಡಳಿತ ಮತ್ತು ಮೈತ್ರಿ ರಾಜ್ಯಗಳ ಮುಖ್ಯಮಂತ್ರಿಗಳು ಮೋದಿ ಅವರಿಗೆ ಸಾಥ್ ನೀಡಿದರು.
ಜೂನ್ 1 ರಂದು ನಡೆಯಲಿರುವ 7ನೇ ಹಾಗು ಕಡೆಯ ಹಂತದ ಚುನಾವಣೆ ನಡೆಯಲಿದೆ.ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎನ್ ಡಿಎ ಮಿತ್ರ ಪಕ್ಷದ ಹಲವು ನಾಯಕರು ಸಾಥ್ ನೀಡಿದರು.
ಈ ವೇಳೆ ಬಿಜೆಪಿಯ ಎನ್ಡಿಎ ಪಾಲುದಾರರಾದ ಲೋಕದಳ ಅಧ್ಯಕ್ಷ ಜಯಂತ್ ಚೌಧರಿ, ಎಲ್ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್, ಅಪ್ನಾ ದಳ (ಎಸ್) ಅಧ್ಯಕ್ಷೆ ಅನುಪ್ರಿಯಾ ಪಟೇಲ್ ಮತ್ತು ಸುಹೇಲ್ದೇವ್ಭಾ ರತೀಯ ಸಮಾಜ ಪಕ್ಷದ ಅಧ್ಯಕ್ಷ ಓಂಪ್ರಕಾಶ್ ರಾಜ್ಭರ್.ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಭಾಗಿಯಾಗಿದ್ದರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಲ್ಲದೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉತ್ತರ ಖಾಂಡ ಮುಖ್ಯಮAತ್ರಿ ಪುಷ್ಕರ್ ಸಿಂಗ್ ಧಾಮಿ, ಮಧ್ಯ ಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್,ಛತ್ತೀಸ್ ಘಡ ಮುಖ್ಯಮಂತ್ರಿ ವಿಷ್ಣು ದೇವ ಸಾಯಿ, ಮಹಾರಾಷ್ಟçದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ರಾಜಸ್ತಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ, ಅಸ್ಸಾಂ ಮುಖ್ಯಮಂತ್ರಿ ಹಿಮAತ ಬಿಸ್ವಾ ಶರ್ಮಾ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಮತ್ತು ತ್ರಿಪುರ ಮುಖ್ಯಮಂತ್ರಿ ಮಾಣಿಕ್ಸ ಹಾ ಸೇರಿದಂತೆ ಘಟಾನುಘಟಿ ನಾಯಕರು ಹಾಜರಿದ್ದರು.
ದಶಾಶ್ವಮೇಧಕ್ಕೆ ಭೇಟಿ ನಾಮಪತ್ರ ಸಲ್ಲಿಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ದಶಾಶ್ವಮೇಧ ಘಾಟ್ಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಗಂಗಾ ನದಿಯಲ್ಲಿನ ದೋಣಿಯಲ್ಲಿ ಸಂಚಾರ ಮಾಡಿದರು.ಈ ವೇಳೆ ವಿವಿಧ ರಾಜ್ಯಗಳು ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಹಾಜರಿದ್ದರು 2014ರಲ್ಲಿ ಮೊದಲ ಬಾರಿಗೆ ವಾರಾನಸಿಯಿಂದ ನರೇಂದ್ರ ಮೋದಿ ಸ್ಪರ್ಧಿಸಿದಾಗ, ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗಿಂತ ಸುಮಾರು 3.37 ಲಕ್ಷ ಹೆಚ್ಚು ಮತಗಳನ್ನು ಪಡೆದಿದ್ದರು. ಈ ಕ್ಷೇತ್ರದಲ್ಲಿ ಶೇ.58.35ರಷ್ಟು ಮತದಾನವಾಗಿತ್ತು.
2019 ರಲ್ಲಿ, ವಾರಣಾಸಿಯಲ್ಲಿ ಶೇಕಡಾ 57.81 ರಷ್ಟು ಮತದಾನವಾದಾಗ, ಮೋದಿಯವರ ಗೆಲುವಿನ ಅಂತರವು ಸಮಾಜವಾದಿ ಪಕ್ಷದ ಶಾಲಿನಿ ಯಾದವ್ ವಿರುದ್ಧ 4.80 ಲಕ್ಷ ಮತಗಳಿಗೆ ಏರಿತು. ಕ್ಷೇತ್ರದ ಬಹುಪಾಲು ಮತದಾರರು ಬ್ರಾಹ್ಮಣರು, ಭೂಮಿಹಾರ್ಗಳು ಮತ್ತು ಜೈಸ್ವಾಲ್ಗಳು ಸೇರಿದಂತೆ ಮೇಲ್ಜಾತಿ ಹಿಂದೂಗಳು, ನಂತರ ಮುಸ್ಲಿಮರು ಮತ್ತು ಒಬಿಸಿಗಳು ಇದ್ದಾರೆ.