ವಾಷಿಂಗ್ಟನ್ : ಅಮೆರಿಕಾದ ಡೆಟ್ರಾಯ್‌ನಲ್ಲಿ ಮನರಂಜನಾ ಸ್ಥಳದಲ್ಲಿದ್ದವರ ಮೇಲೆ ದುಷ್ಕರ್ಮಿಗಳು ನಡೆಸಿದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿ 8 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೇಸಿಗೆಯ ಶಾಖದಿಂದ ತಪ್ಪಿಸಿ ಕೊಳ್ಳಲು ಕುಟುಂಬಗಳು ಸೇರಿದ್ದ ಗುಂಪಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು 8 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಓಕ್ಲ ಲ್ಯಾಂಡ್ ಕೌಂಟಿ ಶೆರಿಫ್ ಕಚೇರಿಯ ವಕ್ತಾರ ಸ್ಟೀಫನ್ ಹ್ಯೂಬರ್ ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾನೂನು ಜಾರಿ ಅಧಿಕಾರಿಗಳು ಶಂಕಿತ ವ್ಯಕ್ತಿ ಪತ್ತೆ ಹಚ್ಚುವ ವೇಳೆಗೆ ಶಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ರೋಚೆಸ್ಟರ್ ಹಿಲ್ಸ್ನಲ್ಲಿ ನಡೆದ ಗುಂಡಿನ ದಾಳಿಯಿಂದ ೧೦ ಜನರಿಗೆ ಗುಂಡೇಟು ತಗುಲಿ ಗಾಯಗೊಂಡಿದ್ದಾರೆ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಎಂದು ಹಿರಿಯ ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಗುಂಡಿನ ದಾಳಿಗೆ ಒಳಗಾದವರನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ಎಲ್ಲರಿಗೂ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನರಂಜನಾ ಪ್ರದೇಶದಲ್ಲಿ ಜನರು ನೀರಿನ ಕಾರಂಜಿಗಳಲ್ಲಿ ಆಟವಾಡುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.