ವಿಜಯನಗರ : ವಿಜಯನಗರದ ಪ್ರಖ್ಯಾತ ರಾಜ ಕೃಷ್ಣದೇವರಾಯ ಸಮಾಧಿ ಮೇಲೆ ಮಾಂಸ ಮಾರಾಟ ಮಾಡಿದ್ದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಇದು ಕನ್ನಡಿಗರಿಗಷ್ಟೇ ರಾಷ್ಟçಕ್ಕೆ ಮಾಡಿದ ಅವಮಾನ ಎಂದು ಬರೆದು ಸಿಟ್ಟು ಹೊರಹಾಕಿದ್ದಾರೆ. ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಕೃಷ್ಣದೇವರಾಯರ ಸಮಾಧಿಯ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಕೆಲ ಸ್ಥಳೀಯರು ಪರಿವರ್ತಿಸಿರುವುದು ಕನ್ನಡ ನಾಡಿನ ಹೆಮ್ಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಕೃಷ್ಣದೇವರಾಯರಿಗೆ ಮಾಡಿದ
ಅವಮಾನ ಎಂದು ಕಿಡಿಕಾರಿದ್ದಾರೆ.
ಹಿಂದೂ ದೇವಾಲಯಗಳನ್ನು ಕೆಡವಿ, ದೇಶದ ಸಂಪತ್ತನ್ನು ದೋಚಿ, ಸಾವಿರಾರು ಹಿಂದೂಗಳನ್ನು ಅಮಾನವೀಯಗಿ ಕೊಂದ ಔರಂಗಜೇಬನ ಸಮಾಧಿಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ ತೆರಿಗೆದಾರರ ಹಣದಿಂದ ಸಂರಕ್ಷಣೆ ಮಾಡುತ್ತಿದೆ ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ ಕಲೆ,ಸಾಹಿತ್ಯ ರಂಗಗಳ ಪೋಷಕ ಕೃಷ್ಣದೇವರಾಯರ ಸಮಾಧಿಗೆ ದಿವ್ಯ ನಿರ್ಲಕ್ಷ್ಯ ಏಕೆ ಎಂದು ಪ್ರಶ್ನಿಸಿದ್ದಾರೆ.
ಇದು ಕನ್ನಡಿಗರಿಗಷ್ಟೇ ಅಲ್ಲ ರಾಷ್ಟçಕ್ಕೆ ಮಾಡಿದ ಅವಮಾನ, ಮಾಂಸ ಮಾರಾಟ ಸ್ಥಳದ ಪಾವಿತ್ರ್ಯತೆ ಹಾಳು ಮಾಡುತ್ತಿರುವ ಇಂತವರನ್ನು ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಲು ಸೂಚಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಲಿ ಎಂದು ಒತ್ತಾಯಿಸಿದ್ದಾರೆ


