Saturday, March 14, 2026
Flats for sale
Homeರಾಜ್ಯವಿಜಯನಗರ : 2 ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ : ಒಂದೇ ಕುಟುಂಬದ...

ವಿಜಯನಗರ : 2 ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ : ಒಂದೇ ಕುಟುಂಬದ 7 ಜನ ಸ್ಥಳದಲ್ಲೇ ಸಾವು.

ವಿಜಯನಗರ : 2 ಲಾರಿ ಮತ್ತು ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 7 ಜನ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಉಮಾ(45), ಕೆಂಚವ್ವ(80), ಭಾಗ್ಯ( 32), ಅನಿಲ್(30), ಗೋಣಿಬಸಪ್ಪ(65), ಯುವರಾಜ(4) ಮತ್ತು ಭೀಮಲಿಂಗ(50) ಮೃತರು. ಸ್ಥಳಕ್ಕೆ ಹೊಸಪೇಟೆ, ಮರಿಯಮ್ಮನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಹೊಸಪೇಟೆ ಪಟ್ಟಣದ ಹೊರವಲಯದ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಾರಿಯ ಆಕ್ಸಲ್ ತುಂಡಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ 7 ಶವಗಳನ್ನು ಹೊರತೆಗೆದು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಮೃತರೆಲ್ಲರೂ ಹೊಸಪೇಟೆ ಮೂಲದವರು. ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular