Saturday, November 23, 2024
Flats for sale
Homeರಾಜಕೀಯವಿಜಯಪುರ : ಚುನಾವಣೆ ಮುಗಿದ 15 ದಿನಗಳಲ್ಲಿ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗೋದು ಸಿದ್ದರಾಮಯ್ಯ ಕುರ್ಚಿ ಹೋಗೋದು...

ವಿಜಯಪುರ : ಚುನಾವಣೆ ಮುಗಿದ 15 ದಿನಗಳಲ್ಲಿ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗೋದು ಸಿದ್ದರಾಮಯ್ಯ ಕುರ್ಚಿ ಹೋಗೋದು ಗ್ಯಾರಂಟಿಗಳಲ್ಲೊಂದು : ಶಾಸಕ ಬಸನಗೌಡ ಯತ್ನಾಳ.

ವಿಜಯಪುರ : ಚುನಾವಣೆ ಮುಗಿದ 15 ದಿನಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗ್ತಾರೆ,ಸಿದ್ದರಾಮಯ್ಯ ಕುರ್ಚಿ ಹೋಗುತ್ತದೆ ಆಗ ಕಾಂಗ್ರೆಸ್ ಒಡೆದು ಹೋಗುತ್ತದೆ. ಬಳಿಕ ಹೊಸ ಸರ್ಕಾರ ರಚನೆಯಾಗುತ್ತದೆ. ಗ್ಯಾರಂಟಿಗಳಲ್ಲೊಂದು ಒಂದು ಗ್ಯಾರಂಟಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್‌ ಈಗಲೇ ತನ್ನ ಪರವಾಗಿರುವ ಲೋಕಸಭಾ ಸದಸ್ಯರ ಆಯ್ಕೆಗೆ ಸ್ಕೆಚ್ ಹಾಕಿದ್ದು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಹರಸಾಹಸ ಪಡುತ್ತಿದ್ದು ,ಸಿಎಂ ಆಗುವ ಕನಸು ಕಾಣುತ್ತಿದ್ದಾರೆ,ಸರಕಾರವನ್ನು ಇಳಿಸಲು ಹೋದರೆ ಕಾಂಗ್ರೆಸ್ ಸರ್ಕಾರ ಪತನ ಆಗಲಿದೆ ಎಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ಸಂದರ್ಭದಲ್ಲಿ ಹೇಳಿದ್ದಾರೆ.ಇದೆ ಕಾರಣಕ್ಕೆ ಕಾಂಗ್ರೆಸ್ ರಾಜ್ಯದಲ್ಲಿ ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತುತ್ತಿದೆ ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್‌ ಪರವಾಗಿರುವ ಅಭ್ಯರ್ಥಿಗಳನ್ನು ಸೋಲಿಸದಿದ್ದರೆ ಚುನಾವಣೆ ಬಳಿಕ ಕಾಂಗ್ರೆಸ್ ಒಡೆದು ಮುಂದೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ,ಸಿದ್ದರಾಮಯ್ಯ ತಮ್ಮ ಶಕ್ತಿ ಪ್ರದರ್ಶನ ಮಾಡದೇ ಹೋದರೆ ಅವರ ಕುರ್ಚಿ ಹೋಗೋದು ಗ್ಯಾರಂಟಿ ಎಂದು ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಒಕ್ಕಲಿಗರು, ಲಿಂಗಾಯತರು ಒಂದೇ ಎನ್ನುವ ಸಂದೇಶ ಕೊಟ್ಟಿದ್ದಾರೆ. ಸಚಿವ ಶಿವಾನಂದ ಪಾಟೀಲ್ ಮಗಳನ್ನು ಗೆಲ್ಲಿಸಿಕೊಟ್ಟರೆ ಶಿವಾನಂದ ಪಾಟೀಲ್ ನನ್ನ ಜೊತೆಗಿರ್ತಾರೆ ಇಲ್ಲದಿದ್ದರೆ ನಾನು ಅವರು ಸೇರಿ ಸಿದ್ದರಾಮಯ್ಯ ಅವರನ್ನು ಇಳಿಸೋಕೆ ಕಾರ್ಯತಂತ್ರ ಮಾಡಿದ್ದೇವೆ ಎಂದು ರಾಜಕೀಯ ಚದುರಂಗ ಆಟದ ಬಗ್ಗೆ ನಾಲಿಗೆಹರಿಯಬಿಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular