Saturday, March 14, 2026
Flats for sale
Homeರಾಜಕೀಯವಿಜಯಪುರ : ಡಿಕೆ ಶಿವಕುಮಾರ್ ಸಿಎಂ ಆಗಲ್ಲ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.

ವಿಜಯಪುರ : ಡಿಕೆ ಶಿವಕುಮಾರ್ ಸಿಎಂ ಆಗಲ್ಲ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.

ವಿಜಯಪುರ : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ ಎಂದು ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶುಕ್ರವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನವನ್ನು ಬಿಟ್ಟುಕೊಡುವುದಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಅವರು ಸಿಎಂ ಆಗಿಯೇ ಇರುತ್ತಾರೆ. ಈ ಅವಧಿಯಲ್ಲಿ ಅವರೇ ಮೊದಲ ಹಾಗೂ ಕೊನೆಯ ಸಿಎಂ’’ ಎಂದು ಯತ್ನಾಳ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಸಿದ್ದರಾಮಯ್ಯ ಹೆಸರಿಗೆ ಸಿಎಂ ಆಗಿದ್ದಾರೆ, ಈ ಕಾಂಗ್ರೆಸ್ ಸರ್ಕಾರದಲ್ಲಿ ಡಿ ಕೆ ಶಿವಕುಮಾರ್ ಅವರು ಸೂಪರ್ ಸಿಎಂ ಆಗಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ.

ಈ ಮಧ್ಯೆ, ಬಿಜೆಪಿಯ ಫೈರ್‌ಬ್ರಾಂಡ್ ನಾಯಕ ಯತ್ನಾಳ್, ಪಕ್ಷದ ನಾಯಕತ್ವವು ತನಗೆ ಕೆಲಸ ನೀಡಿದರೆ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯನ್ನು ಹೊರಲು ಸಿದ್ಧ ಎಂದು ಹೇಳಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular